ಬೆಂಗಳೂರು: ‘ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿರುವ ಕ್ರಮ ಕಾನೂನು ಬಾಹಿರ’ ಎಂದು ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್ಗೆ ಪುನರುಚ್ಚರಿಸಿದರು.

‘ನನ್ನ ವಿರುದ್ಧದ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸಬೇಕು’ ಎಂದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ಐ.ಅರುಣ್ ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಯಡಿಯೂರಪ್ಪ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್, ‘ಹಳೆಯ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದಲ್ಲಿ ತನಗೆ ನ್ಯಾಯ ಕೊಡಿಸುವಂತೆ ಕೋರಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದರು. ಈ ವೇಳೆಯಲ್ಲಿ ಸಂತ್ರಸ್ತೆ ರೆಕಾರ್ಡ್ ಮಾಡಿರುವ ವಿಡಿಯೊದಲ್ಲಿ ಯಡಿಯೂರಪ್ಪ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂಬ ತನಿಖಾಧಿಕಾರಿಗಳ (ಪ್ರಾಸಿಕ್ಯೂಷನ್) ಆರೋಪ ಆಧಾರರಹಿತ’ ಎಂದು ಪ್ರತಿಪಾದಿಸಿದರು.

ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್, ವಾದ ಮಂಡನೆಗೆ ಸಮಯವಕಾಶ ಕೋರಿದ ಕಾರಣ ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.10) ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.