ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ವಿರುದ್ಧ ಪೋಕ್ಸೊ: ತನಿಖೆ ಚುರುಕು

Published 27 ಮಾರ್ಚ್ 2024, 16:04 IST
Last Updated 27 ಮಾರ್ಚ್ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಹಲವು ಪುರಾವೆಗಳನ್ನು ಸಂಗ್ರಹಿಸಿದ್ದಾರೆ.

ಯಡಿಯೂರಪ್ಪ ಅವರ ಮನೆಯಲ್ಲಿ ಫೆಬ್ರುವರಿ 2ರಂದು ನಡೆದಿದ್ದ ಕೃತ್ಯದ ಬಗ್ಗೆ ಬಾಲಕಿಯ ತಾಯಿ ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಸೆಕ್ಷನ್ 8 ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿ ಸದಾಶಿವನಗರ ಠಾಣೆಯಲ್ಲಿ ಮಾರ್ಚ್‌ 14ರಂದು ಎಫ್‌ಐಆರ್ ದಾಖಲಾಗಿತ್ತು.

‘ರಾಜ್ಯ ಸರ್ಕಾರದ ಆದೇಶದಂತೆ, ಸದಾಶಿವನಗರ ಠಾಣೆ ಪೊಲೀಸರಿಂದ ಪ್ರಕರಣದ ಕಡತಗಳನ್ನು ಸುಪರ್ದಿಗೆ ಪಡೆದು ತನಿಖೆ ಆರಂಭಿಸಲಾಗಿದೆ. ಯಡಿಯೂರಪ್ಪ ವಿರುದ್ಧದ ಆರೋಪಕ್ಕೆ ಸಂಬಂಧಪಟ್ಟಂತೆ ಬಾಲಕಿ ಹಾಗೂ ಅವರ ತಾಯಿಯಿಂದಲೂ ಮಾಹಿತಿ ಪಡೆಯಲಾಗುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲ ವಿಡಿಯೊಗಳು ಲಭ್ಯವಾಗಿವೆ. ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ, ಹಲವರ ಹೇಳಿಕೆ ಸಹ ದಾಖಲಿಸಿಕೊಳ್ಳಲಾಗಿದೆ. ಸಿಆರ್‌ಪಿಸಿ 164 ಅಡಿ ಬಾಲಕಿಯ ಹೇಳಿಕೆ ದಾಖಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ’ ಎಂದು ತಿಳಿಸಿವೆ.

ವಿಚಾರಣೆ ನಡೆಸಿ ಕ್ರಮ: ‘ಪುರಾವೆಗಳನ್ನು ಆಧರಿಸಿ ಆರೋಪಿಯನ್ನು ವಿಚಾರಣೆ ನಡೆಸಲಾಗುವುದು. ಇದಾದ ನಂತರ, ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT