ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೆ.2ರಿಂದ ಪೋಡಿ ದುರಸ್ತಿ ಅಭಿಯಾನ: ಸಚಿವ ಕೃಷ್ಣ ಬೈರೇಗೌಡ

Published 30 ಆಗಸ್ಟ್ 2024, 15:20 IST
Last Updated 30 ಆಗಸ್ಟ್ 2024, 15:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಸೆ.2ರಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಕಾಸಸೌಧದಲ್ಲಿ ಶುಕ್ರವಾರ ಅಧಿಕಾರಿಗಳ ಜತೆ ನಡೆಸಿದ ವಿಡಿಯೊ ಸಂವಾದಲ್ಲಿ ಮಾತನಾಡಿದ ಅವರು, ದಶಕಗಳಿಂದ ಖಾಲಿ ಉಳಿದರುವ ಜಮೀನುಗಳ 1-5 ನಮೂನೆ ಪೋಡಿ ದುರಸ್ತಿ ಕಾರ್ಯ ಪೂರ್ಣಗೊಳಿಸಬೇಕು. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿದೆ. ತೊಂದರೆ ಅನುಭವಿಸುತ್ತಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.  

ಪೋಡಿ ದುರಸ್ತಿ ಮಾಡಲು ಅವಶ್ಯವಿರುವ 1-5 ನಮೂನೆಗಳನ್ನು ತಯಾರಿಸಲು ಕಾಗದದ ಕಡತಗಳನ್ನು ಬಳಸಲಾಗುತ್ತಿತ್ತು. ಆದರೆ, ಸಮರ್ಪಕವಾಗಿ ಆಗಿಲ್ಲ. ಕೆಲವು ಕಡತಗಳೇ ಕಾಣೆಯಾಗಿವೆ. ಈಗ ಡಿಜಿಟಲ್‌ ಆ್ಯಪ್‌ ಮೂಲಕ ವೇಗವಾಗಿ ಕಡತಗಳನ್ನು ತಯಾರಿಸಲಾಗುತ್ತಿದೆ ಎಂದರು.

ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ) ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ  ಅನುಕೂಲವಾಗುತ್ತದೆ. ರೈತರ ಅರ್ಜಿಗೆ ಕಾಯದೆ ಕಂದಾಯ ಇಲಾಖೆ ಸ್ವಯಂ ಕಡತಗಳನ್ನು ತಯಾರಿಸಲಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT