ಬೆಂಗಳೂರು: ವೈದ್ಯಕೀಯ ನಿಗಾ ಘಟಕದಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕು ಶಂಕಿತ ವ್ಯಕ್ತಿಯೊಬ್ಬನನ್ನು ಇಂದಿರಾನಗರ ಠಾಣೆಯ ಪೊಲೀಸರು ಮನವೊಲಿಸಿ ನಗರಕ್ಕೆ ಮರಳಿ ಕರೆದುಕೊಂಡು ಬರುವಲ್ಲಿ ಯಶಸ್ವಿ ಆಗಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗಿಡ್ಡರಾವ್ ಎಂಬವರನ್ನು ಕರೆದುಕೊಂಡು ಬಂದಿದ್ದು, ಸರ್ ಸಿ.ವಿ. ರಾಮನ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ವಿದೇಶದಿಂದ ಬಂದಿದ್ದ ಗಿಡ್ಡರಾವ್ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿತ್ತು. ಸೋಂಕು ಶಂಕಿತ ಎಂಬ ಕಾರಣಕ್ಕೆ ಇಂದಿರಾನಗರದ ಸಿ.ವಿ. ರಾಮನ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವೈದ್ಯಕೀಯ ನಿಗಾ ಘಟಕದಲ್ಲಿ ಇಡಲಾಗಿತ್ತು.

ಆದರೆ, ಮಂಗಳವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವೈದ್ಯಕೀಯ ಪರೀಕ್ಷೆಯ ಬಳಿಕ ತನಗೆ ಸೋಂಕು ಇಲ್ಲ ಎಂದು ಭಾವಿಸಿ ಆತ ಊರಿಗೆ ಮರಳಿದ್ದ. ಈ ಮಾಹಿತಿ ಪಡೆದ ಇಂದಿರಾಗನಗರ ಪೊಲೀಸರು ಅನಂತಪುರ ಜಿಲ್ಲೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿಯೇ ಪೊಲೀಸರ ತಂಡ ಅಲ್ಲಿಗೆ ತೆರಳಿ ಅವರನ್ನು ಮನವೊಲಿಸಿ ಕರೆದುಕೊಂಡು ಬಂದಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.