ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ತಲೆಮರೆಸಿಕೊಂಡ ಇನ್‌ಸ್ಪೆಕ್ಟರ್‌ ಕಿಶೋರ್‌

ಮುಟ್ಟುಗೋಲು ಹಾಕಿಕೊಂಡಿದ್ದ ಜಮೀನು ಮಾರಾಟ
Last Updated 19 ಅಕ್ಟೋಬರ್ 2022, 21:31 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸಿಎಲ್‌ (ಪರ್ಲ್‌ ಆಗ್ರೋ ಕಾರ್ಪೊರೇಶನ್ ಸಂಸ್ಥೆ) ಹಗರಣದಲ್ಲಿ ಸುಪ್ರೀಂ ಕೋರ್ಟ್‌ ಆದೇಶದಂತೆ ಮುಟ್ಟುಗೋಲು ಹಾಕಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಪ್ರಕರಣದಲ್ಲಿ ಅಮಾನತು ಗೊಂಡಿರುವ ಆಂತರಿಕ ಭದ್ರತಾ ವಿಭಾ ಗದ ಪೊಲೀಸ್‌ ಇನ್‌ಸ್ಪೆಕ್ಟರ್‌ ಬಿ.ಕೆ.ಕಿಶೋರ್‌ಕುಮಾರ್‌ ತಲೆಮರೆಸಿಕೊಂಡಿದ್ದಾರೆ.

ಆಂತರಿಕ ಭದ್ರತಾ ವಿಭಾಗದ ಹೆಚ್ಚು ವರಿ ಪೊಲೀಸ್‌ ಮಹಾನಿರ್ದೇಶಕ ವಿಪುಲ್‌ಕುಮಾರ್‌ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ‘ಪ್ರಕರಣದ ತನಿಖೆಗೆ ಹಾಜರಾಗುವಂತೆ ತನಿಖಾ ತಂಡ ನೋಟಿಸ್‌ ನೀಡಿದ ಬಳಿಕ ಕಿಶೋರ್‌ ತಲೆಮರೆಸಿಕೊಂಡಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ. ಆರೋಪಿ ಇನ್‌ಸ್ಪೆಕ್ಟರ್‌ ಪತ್ತೆಗೆ ವಿವಿಧ ರಾಜ್ಯಗಳಲ್ಲಿ ಶೋಧ ನಡೆಸಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಪಿಎಸಿಎಲ್‌ ಹಗರಣ ಕುರಿತು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಿದ್ದರು. ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡಿರುವ ನ್ಯಾಯಮೂರ್ತಿ ಆರ್‌.ಎಂ. ಲೋಧಾ ನೇತೃತ್ವದ ಸಮಿ ತಿಯು ಆನೇಕಲ್‌ ತಾಲ್ಲೂಕಿನ ಎಂ.ಮೇಡಹಳ್ಳಿಯಲ್ಲಿರುವ 12 ಎಕರೆ ಜಮೀನನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಜಮೀನನ್ನು ಮಾರಾಟ ಮಾಡಿ ವಂಚನೆಗೊಳಗಾದ ಜನರಿಗೆ ಹಣ ಮರುಪಾವತಿಗೆ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಆದರೆ, ಕೆಲವರು ನಕಲಿ ದಾಖಲೆ ಸೃಷ್ಟಿಸಿ ಈ ಜಮೀನನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ.

ಸುಪ್ರೀಂ ಕೋರ್ಟ್‌ ಮುಟ್ಟುಗೋಲು ಹಾಕಿಕೊಂಡಿದ್ದ ಜಮೀನನ್ನು ಅಕ್ರಮ ವಾಗಿ ಮಾರಾಟ ಮಾಡಿರುವ ಕುರಿತು ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔ ಟ್‌ನ ನಿವಾಸಿ ಶ್ರೀಧರ್‌ ಎಂಬುವವರು ಅತ್ತಿಬೆಲೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆನೇಕಲ್‌ ಡಿವೈಎಸ್‌‍ಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಇನ್‌ಸ್ಪೆಕ್ಟರ್‌ ಕಿಶೋರ್‌ ಅವರ ಸಂಬಂಧಿಕರು ಮತ್ತು ನಿಕಟವರ್ತಿ ಗಳು ಅಕ್ರಮದಲ್ಲಿ ಭಾಗಿಯಾಗಿರುವ ಆರೋಪವಿದೆ.

‘ದೂರುದಾರ ಶ್ರೀಧರ್‌ಗೆ ಇನ್‌ ಸ್ಪೆಕ್ಟರ್‌ ಕಿಶೋರ್‌ ಬೆದರಿಕೆ ಹಾಕಿದ್ದಾರೆ. ಜತೆಗೆ ಆರೋಪಿ ಮಂಜುನಾಥ್‌ ಹಾಗೂ ಚಂದ್ರಮೋಹನ್ ಜತೆಗೆ ಮೊಬೈಲ್‌ ಸಂಪರ್ಕದಲ್ಲಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಕಿಶೋರ್‌ ಅವರನ್ನು 12ನೇ ಆರೋಪಿಯಾಗಿ ಮಾಡಲಾ ಗಿದ್ದು, ತನಿಖೆ ನಡೆಸಲಾಗುತ್ತಿದೆ. ಅವರು ಎರಡು ಮೊಬೈಲ್‌ ಬಳಸುತ್ತಿರುವುದು ತನಿಖೆ ವೇಳೆ ಸಾಬೀತಾಗಿದೆ. ತನಿಖೆಗೆ ಮೊಬೈಲ್‌ ಒಪ್ಪಿಸುವಂತೆ ಸೂಚಿಸಿ ನೋಟಿಸ್‌ ಜಾರಿಗೊಳಿಸಲಾಗಿತ್ತು. ಬಳಿಕ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ತಲೆಮರೆಸಿಕೊಂಡಿ
ದ್ದಾರೆ’ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ. ‘ಕಿಶೋರ್‌ ಅವರು ಕೌಟುಂಬಿಕ ಸಮಸ್ಯೆಯ ಕಾರಣ ನೀಡಿ, ಅ.1ರಿಂದ 31ರ ತನಕ ಗಳಿಕೆ ರಜೆ ಕೋರಿದ್ದರು. ಈ ರಜೆಯನ್ನು ಮಂಜೂರು ಮಾಡಿರಲಿಲ್ಲ. ಮೈಸೂರು ದಸರಾ ಬಂದೋಬಸ್ತ್‌ಗೆ ನಿಯೋಜಿಸಲಾಗಿತ್ತು. ಕಂಟ್ರೋಲ್‌ ರೂಂ ಮೂಲಕ ಮಾಹಿತಿ ತಿಳಿಸಲು ಪ್ರಯತ್ನಿಸಿದರೂ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅನಧಿಕೃತ ಗೈರಾಗಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅಮಾನತು ಮಾಡ ಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT