ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರು ಈ ಹಿಂದೆ ನ್ಯಾಯಾಂಗ ಬಂಧನದಲ್ಲಿ ಇದ್ದಾಗ, ವಿಶೇಷ ಆತಿಥ್ಯ ಪಡೆದ ಆರೋಪ ಇತ್ತು. ಹೀಗಾಗಿ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿತ್ತು. ಬಂಧನದ ಬಳಿಕ ಮತ್ತೆ ಅದೇ ಜೈಲಿಗೆ ಕಳುಹಿಸಲು ಸಿದ್ದತೆ ನಡೆದಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.