ಬೆಂಗಳೂರು: ರಾಜಕೀಯದಲ್ಲಿ ಸೆಪ್ಟೆಂಬರ್ ನಂತರ ಕ್ರಾಂತಿ ಆಗಲಿದೆ. ಅದು ಪಕ್ಷದ ವಿಚಾರದಲ್ಲಿಯೊ, ಸರ್ಕಾರದ ವಿಚಾರದಲ್ಲಿಯೊ ಎಂಬುದನ್ನು ಕಾದು ನೋಡಿ’ ಎಂಬ ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಮೇ ಕ್ರಾಂತಿ, ಆಗಸ್ಟ್ ಕ್ರಾಂತಿ ಎಂದೆಲ್ಲ ಕೇಳಿಲ್ಲವೇ? ಅದೇ ರೀತಿ ಇದು ಸೆಪ್ಟೆಂಬರ್ ಕ್ರಾಂತಿ. ಏನಾಗಲಿದೆ ಎಂಬುದನ್ನು ಈಗಲೇ ಹೇಳಿದರೆ ಆಸಕ್ತಿ ಹೋಗಿಬಿಡುತ್ತದೆ. ಏನು ಬೇಕಿದ್ದರೂ ಊಹೆ ಮಾಡಿಕೊಳ್ಳಿ’ ಎಂದರು.

‘ರಾಜಕಾರಣ ಎಂದೂ ನಿಂತ ನೀರಲ್ಲ, ಹರಿಯುವ ನೀರು. ಅದು ಎತ್ತರಕ್ಕೆ ಏರಲ್ಲ. ಹಳ್ಳ ಇದ್ದ ಕಡೆಗೆ ಹರಿಯುತ್ತದೆ. ಯಾವ್ಯಾವ ಘಟನಾವಳಿಗಳು ಯಾವ್ಯಾವ ಸಂದರ್ಭದಲ್ಲಿ ಆಗುತ್ತವೆಯೋ ಅದನ್ನು ಆಧರಿಸಿ ಮುಂದಿನ ಕಾರ್ಯಚಟುವಟಿಕೆ ಗಳು ರಾಜಕಾರಣದಲ್ಲಿ ನಡೆಯುತ್ತವೆ’ ಎಂದರು.

‘ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ನಾಯಕರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೂ ಭೇಟಿ ಮಾಡಿ ರಾಜ್ಯ ರಾಜಕೀಯ ಚಟುವಟಿಕೆಯ ಕುರಿತು ಚರ್ಚಿಸಿದ್ದಾರೆ. ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಇರುವ ಕಾರಣ ಸದ್ಯಕ್ಕೆ ಇದಕ್ಕೆಲ್ಲ ಮಹತ್ವ ಕೊಡುವ ಅಗತ್ಯವಿಲ್ಲ. ಅವರು ಬಂದ ನಂತರ ಕೆಲವು ರಾಜಕೀಯ ಬದಲಾವಣೆಯ ತೀರ್ಮಾನ ಆಗುತ್ತದೆ ಎಂದು ನಾನು ನಿರೀಕ್ಷೆ ಮಾಡಿದ್ದೇನೆ’ ಎಂದು ಹೇಳಿದರು.

‘ಪವರ್ ಸೆಂಟರ್’ಗಳು ಜಾಸ್ತಿ ಆಗಿವೆ:

‘ಕಾಂಗ್ರೆಸ್ನಲ್ಲಿ ಪವರ್ ಸೆಂಟರ್ಗಳು ಜಾಸ್ತಿ ಆಗಿವೆ. 2013-2018ರಲ್ಲಿ ಪವರ್ ಸೆಂಟರ್ ಒಂದೇ ಇದ್ದದ್ದು. ಈಗ ಎರಡು-ಮೂರು ಎಷ್ಟು ಬೇಕಿದ್ದರೂ ಹೇಳಿಕೊಳ್ಳಬಹುದು. ಪವರ್ ಸೆಂಟರ್ ಜಾಸ್ತಿ ಇದ್ದಾಗ ಜಂಜಾಟವೂ ಜಾಸ್ತಿ ಆಗುತ್ತದೆ. ಅದಕ್ಕೆ ಅನುಗುಣವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರವನ್ನು ನಡೆಸಬೇಕಾಗುತ್ತದೆ. 2013-18ರ ಸಿದ್ದರಾಮಯ್ಯ ಈಗ ಇಲ್ಲ ಎಂಬುದು ಜನರ ಅಭಿಪ್ರಾಯ. ಪವರ್ ಸೆಂಟರ್ ಬಹಳಷ್ಟು ಇರುವುದರಿಂದಲೇ ಹೀಗಾಗಿರುವುದು’ ಎಂದರು.

‘ತಿಂಗಳಲ್ಲಿ 15-20 ದಿನ ಬೇರೆ ಜಿಲ್ಲೆಗಳಿಗೆ ಹೋಗಿ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿಯವರು ಶಂಕುಸ್ಥಾಪನೆ ಮಾಡುತ್ತಿದ್ದಾರೆ. ಅನುದಾನ ಇಲ್ಲದಿದ್ದರೆ ಇದನ್ನೆಲ್ಲ ಮಾಡಲಾಗುತ್ತದೆಯೇ? ನಿರೀಕ್ಷೆಗೆ ತಕ್ಕಂತೆ ಅನುದಾನ ಸಿಕ್ಕಿಲ್ಲ ಎನ್ನುವುದು ಬಹಳ ಶಾಸಕರು, ಕಾರ್ಯಕರ್ತರ ಭಾವನೆ ಇರಬಹುದು. ಗ್ಯಾರಂಟಿಗಳು ಸೇರಿ ಮತ್ತಿತರ ಯೋಜನೆಗಳ ಜಾರಿ ಸಂದರ್ಭದಲ್ಲಿ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚಿದೆ. ಆದರೂ ಆಡಳಿತ- ವಿರೋಧ ಪಕ್ಷ ಎಂಬ ತಾರತಮ್ಯ ಇಲ್ಲದೆ ಅನುದಾನ ಒದಗಿಸಲಾಗುತ್ತಿದೆ. ಏನೂ ಕೊಡುತ್ತಿಲ್ಲ, ಅಭಿವೃದ್ಧಿ ಆಗುತ್ತಿಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು’ ಎಂದು ಪ್ರತಿಕ್ರಿಯಿಸಿದರು.

ಸರ್ಕಾರದ ಮೇಲೆ ಆರ್ಥಿಕ ಹೊರೆ: ‘ಗ್ಯಾರಂಟಿ ಕೊಟ್ಟಿದ್ದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ’ ಎಂದು ರಾಜಣ್ಣ ಹೇಳಿದರು.

‘ರಾಜ್ಯದಾದ್ಯಂತ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಚಾಲನೆ ಕೊಡುತ್ತಿದ್ದಾರೆ. ಹಣ ಇಲ್ಲದೇ ಇದ್ದರೆ ಕಾಮಗಾರಿಗಳಿಗೆ ಚಾಲನೆ ನೀಡಲು ಆಗುತ್ತಿತ್ತೆ’ ಎಂದು ಪ್ರಶ್ನಿಸಿದರು.

‘ಬೇಡಿಕೆ ತಕ್ಕಂತೆ ಅನುದಾನ ಸಿಕ್ಕಿಲ್ಲವೆಂದು ಶಾಸಕರಿಗೆ ಬೇಸರ ಇರಬಹುದು. ಆರ್ಥಿಕ ಲಭ್ಯತೆಗೆ ಅನುಗುಣವಾಗಿ ಯಾವುದೇ ತಾರತಮ್ಯ ಇಲ್ಲದೆ ಕ್ಷೇತ್ರಗಳ ಅಭಿವೃದ್ದಿಗೆ ಅನುದಾನ ಸಿಗುತ್ತಿದೆ. ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಎನ್ನುವುದು ಸತ್ಯಕ್ಕೆ ದೂರವಾದ ಮಾತು’ ಎಂದರು.

‘ವರ್ಷಾಂತ್ಯದಲ್ಲಿ ಸಣ್ಣಪುಟ್ಟ ಬದಲಾವಣೆ’

‘ಸರ್ಕಾರದಲ್ಲಿ ವರ್ಷಾಂತ್ಯದಲ್ಲಿ ಸಣ್ಣಪುಟ್ಟ ಬದಲಾವಣೆ ಆಗಲಿದೆ. ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.

‘ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಪ್ರಯತ್ನ ನಡೆಸಿಲ್ಲ. ಪ್ರಯತ್ನ ನಡೆಸಿದರೆ ಮುಂದುವರಿಸಬಹುದು. ನಾನು ಎಲ್ಲಿ ಇದ್ದೇನೊ ಅಲ್ಲೇ ಇದ್ದೇನೆ. ನನ್ನನ್ನು ಹಿಂದಿನಿಂದ ಬೆಂಬಲಿಸುವವರು ಯಾರೂ ಇಲ್ವಲ್ಲ. ಹುಲಿ ಯಾವತ್ತಿದ್ದರೂ ಹುಲಿ, ವಯಸ್ಸಾದರೂ ಹುಲಿ, ಹುಲಿಯೇ’ ಎಂದರು.

‘ಜಲ ಸಂಪನ್ಮೂಲ ಇಲಾಖೆಯಿಂದ ಅನುದಾನ ಸಿಕ್ಕಿಲ್ಲ’ ಎಂಬ ಶಾಸಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನೀರಾವರಿ ಸಮಸ್ಯೆ ಬಗ್ಗೆ ಶಾಸಕ ರಾಜು ಕಾಗೆ ಮೊದಲಿನಿಂದಲೂ ಹೇಳುತ್ತಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿದೆ. ಈ ಬಗ್ಗೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕರೆದು ಮುಖ್ಯಮಂತ್ರಿ ಮಾತನಾಡುತ್ತಾರೆ’ ಎಂದು ಹೇಳಿದರು.

‘ಜಲ ಸಂಪನ್ಮೂಲ ಇಲಾಖೆಯಲ್ಲಿ ಹಣ ಇಲ್ಲ ಎಂದವರು ಯಾರು? ಇಲಾಖೆಯಲ್ಲಿ ₹25 ಸಾವಿರ ಕೋಟಿ ಹಣ ಇದೆ. ಬಾಕಿ ಬಿಲ್ಗಳೂ ಇವೆ. ಯಾವ ಸರ್ಕಾರ ಬಂದರೂ ಆರಂಭದ ಮೂರು ವರ್ಷದ ಬಿಲ್ ಬಾಕಿ ಇರುತ್ತದೆ’ ಎಂದರು.

‘ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿದ ವೇಳೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ಯುದ್ಧ ಇದ್ದಾಗ ಶಸ್ತ್ರ ಹಿಡಿಯಬೇಕು. ಯುದ್ಧ ಇಲ್ಲದೇ ಇರುವಾಗ ಶಸ್ತ್ರ ಹಿಡಿಯುವ ಅಗತ್ಯ ಇಲ್ಲ’ ಎಂದೂ ಹೇಳಿದರು.

‘ವರಿಷ್ಠರು ಎಲ್ಲವನ್ನೂ ಗಮನಿಸುತ್ತಾರೆ. ಯಾರಿಗೆ ಏನು ಕೊಡಬೇಕೆಂದು ಹೈಕಮಾಂಡ್ಗೆ ಗೊತ್ತಿದೆ. ಬಿ.ಆರ್. ಪಾಟೀಲ ಅವರ ಹೇಳಿಕೆ ವಿಚಾರವೂ ದೆಹಲಿಯಲ್ಲಿ ಚರ್ಚೆ ಆಗಿದೆ’ ಎಂದರು.

ಹಿಡಿತ ಕಳೆದುಕೊಂಡಿಲ್ಲ: ಡಿಕೆಶಿ

‘ಆಡಳಿತದ ಮೇಲೆ ಮುಖ್ಯಮಂತ್ರಿ ಹಿಡಿತ ಕಳೆದುಕೊಂಡಿಲ್ಲ. ಇದು ಮಾಧ್ಯಮಗಳ ಸೃಷ್ಟಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ಹಲವು ಶಾಸಕರು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದು, ಆಡಳಿತದಲ್ಲಿ ಮುಖ್ಯಮಂತ್ರಿ ಹಿಡಿತ ಕಳೆದುಕೊಳ್ಳುತ್ತಿದ್ದಾರೆಯೇ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಏನಾದರೂ ಇದ್ದರೆ ವರಿಷ್ಠರ ಜೊತೆ ನಾನು ಮತ್ತು ಮುಖ್ಯಮಂತ್ರಿ ಮಾತನಾಡುತ್ತೇವೆ’ ಎಂದರು.

ಅಧ್ಯಕ್ಷನಾಗಿ ಶಾಸಕರಿಂದ ಮಾಹಿತಿ ಸಂಗ್ರಹ:

ಶಾಸಕ ಬಿ.ಆರ್. ಪಾಟೀಲ ಅವರು ಭೇಟಿ ಮಾಡಿದ್ದ ಬಗ್ಗೆ ಕೇಳಿದಾಗ, ‘ಪಕ್ಷದ ಅಧ್ಯಕ್ಷನಾಗಿ ನಾನು ವಾಸ್ತವಾಂಶ ತಿಳಿಯಬೇಕಾಗಿತ್ತು. ಹೀಗಾಗಿ, ಅವರನ್ನು ಕರೆಸಿ ಮಾತನಾಡಿದೆ. ಅವರು ತಮ್ಮ ವಿಚಾರ ಹೇಳಿದ್ದಾರೆ. ನಾನು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡುತ್ತೇನೆ. ಸಚಿವ ಜಮೀರ್ ಜೊತೆಗೂ ಮಾತನಾಡುತ್ತೇವೆ’ ಎಂದರು.
.ವರ್ಷಾಂತ್ಯದಲ್ಲಿ ಸರ್ಕಾರದಲ್ಲಿ ಸಣ್ಣಪುಟ್ಟ ಬದಲಾವಣೆ: ಸತೀಶ ಜಾರಕಿಹೊಳಿ ಸುಳಿವು.ಆಡಳಿತದಲ್ಲಿ ಸಿಎಂ ಸಿದ್ದರಾಮಯ್ಯ ನಿಯಂತ್ರಣ ಕಳೆದುಕೊಂಡಿಲ್ಲ: ಡಿ.ಕೆ. ಶಿವಕುಮಾರ್.ಸಿ.ಎಂ ಸಿದ್ದರಾಮಯ್ಯ ಭೇಟಿಯಾದ ಸಚಿವ ಜಮೀರ್, ಶಾಸಕ ರಾಜು ಕಾಗೆ.ದುಡ್ಡಿಲ್ಲ ಅಂತಾ ಪರಮೇಶ್ವರ್ ಬಾಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಸಿದ್ದಾರೆ: ಬಿಜೆಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.