‘ಆದರೆ, ಕೆಲವು ಸರ್ಕಾರಿ ನೌಕರರು ಈ ಸೂಚನೆಗಳನ್ನು ಪಾಲಿಸುತ್ತಿಲ್ಲ. ತಮ್ಮ ವರ್ಗಾವಣೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ನೇರವಾಗಿ ಮನವಿಗಳನ್ನು ಸಲ್ಲಿಸುತ್ತಿದ್ದಾರೆ. ಅಲ್ಲದೆ, ರಾಜಕೀಯ ಪ್ರಭಾವ ಬೀರುತ್ತಿರುವುದೂ ಗೊತ್ತಾಗಿದೆ. ಹೀಗಾಗಿ, ಈ ಹಿಂದೆಯೇ ನೀಡಿರುವ ಸರ್ಕಾರಿ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಸರ್ಕಾರಿ ನೌಕರರಿಗೆ ಸೂಚನೆ ನೀಡಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಅಗತ್ಯ ಕ್ರಮ ವಹಿಸಬೇಕು’ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.