ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಹಾಗೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದ ಮೇಲೆ, ಚುನಾವಣಾ ಅಧಿಕಾರಿಗಳ ತಂಡ ಬುಧವಾರ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಮಾಗಡಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ಕ್ಷಿಪ್ರ ಕಾರ್ಯಪಡೆ ತಂಡ (ಎಫ್‌ಎಸ್‌ಟಿ) ಹಾಗೂ ವಿಡಿಯೊ ಪರಿವೀಕ್ಷಣಾ ತಂಡ ಸ್ಥಳಕ್ಕೆ ಭೇಟಿ ನೀಡಿದಾಗ ತೋಟದಲ್ಲಿ ಶಾಮಿಯಾನ ಹಾಕಿ, ಸುಮಾರು 50 ಕುರ್ಚಿ ಹಾಗೂ ಊಟದ ಟೇಬಲ್‌ಗಳನ್ನು ಹಾಕಲಾಗಿತ್ತು. ಮಧ್ಯಾಹ್ನದ ಊಟಕ್ಕೆ ಅಡುಗೆಯವರು ಬಾಡೂಟ ಸಿದ್ಧಪಡಿಸುತ್ತಿದ್ದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಊಟದ ವ್ಯವಸ್ಥೆಗೆ ಅವಕಾಶವಿಲ್ಲ ಎಂದು ಸ್ಥಳದಲ್ಲಿದ್ದವರಿಗೆ ಎಚ್ಚರಿಕೆ ನೀಡಲಾಯಿತು. ಶಾಮಿಯಾನ, ಕುರ್ಚಿ ಹಾಗೂ ಟೇಬಲ್‌ಗಳನ್ನು ತೆರವುಗೊಳಿಸಲಾಯಿತು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.