ಬೆಂಗಳೂರು: ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳ ಜನರಿಗೆ ನಿಖರವಾದ ಅಂಕಿಅಂಶಗಳ ಸಮೇತ ಪರಿಶೀಲನೆ ನಡೆಸಿ ರಾಜಕೀಯ ಮೀಸಲಾತಿ ನಿಗದಿಪಡಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದಲ್ಲಿ ಆಯೋಗ ನೇಮಕ ಮಾಡಿ ಭಾನುವಾರ ಆದೇಶ ತಿದ್ದುಪಡಿ ಹೊರಡಿಸಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರನ್ನು ಈ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ನಿಖರವಾದ ಅಂಕಿಅಂಶಗಳೊಂದಿಗೆ ಖಚಿತಪಡಿಸಿಕೊಂಡ ಬಳಿಕವೇ ಈ ಸಮುದಾಯಗಳಿಗೆ ರಾಜಕೀಯ ಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಇದಕ್ಕಾಗಿ ಮೂರು ಹಂತದ ಪರಿಶೀಲನೆ ನಡೆಸುವಂತೆ ನ್ಯಾಯಾಲಯ ತಾಕೀತು ಮಾಡಿತ್ತು.

ಸುಪ್ರೀಂ ಕೋರ್ಟ್ ಆದೇಶದಂತೆ ನ್ಯಾ. ಕೆ. ಭಕ್ತವತ್ಸಲ ನೇತೃತ್ವದ ಆಯೋಗ ನೇಮಿಸಲಾಗಿದೆ. ಹಿಂದುಳಿದ ವರ್ಗಗಳ ರಾಜಕೀಯ ಹಿಂದುಳಿದಿರುವಿಕೆ ಕುರಿತು ಆಯೋಗವು ಅಧ್ಯಯನ ನಡೆಸಿ, ಮೀಸಲಾತಿ ನಿಗದಿಗೆ ಶಿಫಾರಸುಗಳನ್ನು ಮಾಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.