ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿಯ ಹಿಂದೆ ಬಿಜೆಪಿಯ ಸಂತೋಷ ಕೂಟದ ಕೈವಾಡ ಇರುವುದು ನಿಶ್ಚಿತ ಎಂದು ಕಾಂಗ್ರೆಸ್ ಆರೋಪಿಸಿದೆ.
ಯಡಿಯೂರಪ್ಪ ಅವರ ಮನೆ ಮೇಲಿನ ದಾಳಿ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ, ಆದರೂ ಸರ್ಕಾರದ ಅವಾಂತರಕ್ಕೆ ಬಿಎಸ್‌ವೈ ಮನೆ ಮೇಲೆ ದಾಳಿ ಆಗಿದ್ದೇಕೆ?, ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ’ ಎಂದು ಕಿಡಿಕಾರಿದೆ.
‘ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಗಳೆಲ್ಲದರ ಬೀಜ ಬಿತ್ತುವುದು ಗೃಹಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಏಕೆ?, ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಆರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ ‘ಸಂತೋಷ ಕೂಟ’ವನ್ನು ಮೆಚ್ಚಿಸುವ ಷಡ್ಯಂತ್ರವೋ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ. ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು? ಆರಗ ಜ್ಞಾನೇಂದ್ರ ಅವರೇ, ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ?, ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಮಾಡಿದ್ದು ಯಾರ ‘ಸಂತೋಷ’ದ ಕಾರಣಕ್ಕೆ’ ಎಂದು ಕಾಂಗ್ರೆಸ್ ಮಾರ್ಮಿಕವಾಗಿ ಟೀಕಿಸಿದೆ.
‘ಬಿಜೆಪಿಯ ಹಿಂದಿನ ಅಧಿಕಾರವಧಿಯಲ್ಲಿ ಸಿಎಂ ಸೇರಿ ಸಾಲು ಸಾಲಾಗಿ ಬಿಜೆಪಿಗರು ಪರಪ್ಪನ ಅಗ್ರಹಾರಕ್ಕೆ ಅತಿಥಿಗಳಾಗಿದ್ದರು. ಈಗ ಮಾಡಾಳ್‌ರಿಂದ ಮತ್ತೆ ಬಿಜೆಪಿಯ ಜೈಲು ಪರ್ವ ಶುರುವಾಗಿದೆ. ಕಾಕಂಬಿ ಹಗರಣದ ಪ್ರಾಮಾಣಿಕ ತನಿಖೆ ನಡೆದರೆ ಮಾಡಾಳ್‌ರಿಗೆ ಸಿಎಂ ಬೊಮ್ಮಾಯಿ ಅವರೂ ಜೈಲಿನ ಸಂಗಾತಿಯಾಗಿ ಹೋಗಬೇಕಾಗುತ್ತದೆ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಇವನ್ನೂ ಓದಿ...
ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ.
— Karnataka Congress (@INCKarnataka) March 28, 2023
ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು?@JnanendraAraga ಅವರೇ?
ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ?
ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ BSYರ ಮನೆ ಮೇಲೆ ದಾಳಿ ಮಾಡಿದ್ದು ಯಾರ "ಸಂತೋಷ"ದ ಕಾರಣಕ್ಕೆ?
BSY ಅವರು ಮುಖ್ಯಮಂತ್ರಿಯಲ್ಲ,
— Karnataka Congress (@INCKarnataka) March 28, 2023
ಸರ್ಕಾರದ ನಿರ್ದಾರಗಳಲ್ಲಿ ಅವರ ಪಾತ್ರವಿಲ್ಲ,
ಆದರೂ ಸರ್ಕಾರದ ಅವಾಂತರಕ್ಕೆ BSY ಮನೆ ಮೇಲೆ ದಾಳಿ ಆಗಿದ್ದೇಕೆ?
ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ.
BSY ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ.
ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಗಳೆಲ್ಲದರ ಬೀಜ ಬಿತ್ತುವುದು ಗೃಹಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಏಕೆ?
— Karnataka Congress (@INCKarnataka) March 28, 2023
ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ @JnanendraAraga ಅವರದ್ದು ಹೊಣೆಗೇಡಿತನವೋ ಅಥವಾ "ಸಂತೋಷ ಕೂಟ"ವನ್ನು ಮೆಚ್ಚಿಸುವ ಷಡ್ಯಂತ್ರವೋ?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.