ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟಿಸ್‌ ಸ್ವೀಕರಿಸಲು ಅಮಿತ್‌ ಮಾಳವೀಯಾ ನಕಾರ

Published 12 ಮೇ 2024, 23:24 IST
Last Updated 12 ಮೇ 2024, 23:24 IST
ಅಕ್ಷರ ಗಾತ್ರ

ಬೆಂಗಳೂರು: ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೀಡಿದ್ದ ನೋಟಿಸ್ ಸ್ವೀಕರಿಸಲು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ನಿರಾಕರಿಸಿದ್ದಾರೆ.

ಪಶ್ಚಿಮ ಬಂಗಾಳದ ಕೃಷ್ಣನಗರ ಹೋಟೆಲ್​ನಲ್ಲಿ ಅಮಿತ್ ಮಾಳವೀಯಾ ಅವರನ್ನು ಭೇಟಿಯಾದ ಬೆಂಗಳೂರಿನ ಹೈಗ್ರೌಂಡ್ಸ್​​ ಠಾಣೆ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದರು. ಆದರೆ, ಪೊಲೀಸರು ತಂದಿದ್ದ ನೋಟಿಸ್ ಸ್ವೀಕರಿಸದ ಅಮಿತ್ ಮಾಳವೀಯಾ, ‘ಈಗಾಗಲೇ ಇ–ಮೇಲ್ ಮೂಲಕ ನನಗೆ ನೋಟಿಸ್ ಬಂದಿದೆ. ನೋಟಿಸ್​ಗೆ ಉತ್ತರ ನೀಡಲು 7 ದಿನ ಅವಕಾಶವಿದೆಯೆಂದು ಹೇಳಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಚೋದನಕಾರಿ ವಿಡಿಯೊ ಪೋಸ್ಟ್ ಅಪ್‌ಲೋಡ್ ಮಾಡಿದ್ದ ಆರೋಪದಡಿ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೂ ನೋಟಿಸ್ ಜಾರಿ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT