ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಪತ್ರಕ್ಕಾಗಿ ಸಹಾಯಕ ಪ್ರಾಧ್ಯಾಪಕರ ಧರಣಿ

Published 6 ಮಾರ್ಚ್ 2024, 15:29 IST
Last Updated 6 ಮಾರ್ಚ್ 2024, 15:29 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಎಲ್ಲರಿಗೂ ಸರ್ಕಾರ ನೇಮಕಾತಿ ಆದೇಶ ನೀಡಬೇಕು. ಸ್ಥಳ ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿ ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1,242 ಹುದ್ದೆಗಳಿಗೆ 2021 ರಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ವರ್ಷ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಈ ಆಯ್ಕೆ ಪಟ್ಟಿಯಲ್ಲಿ ಒಟ್ಟು 1,208 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ವಿಶೇಷ ರಾಜ್ಯಪತ್ರದಲ್ಲೂ ಪ್ರಕಟಿಸಲಾಗಿದೆ. ಆದರೆ, ಇದುವರೆಗೂ ನೇಮಕಾತಿ ಆದೇಶ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗಾಗಿ ಉನ್ನತ ಶಿಕ್ಷಣ ಇಲಾಖೆ ಫೆ.26 ರಂದು ಹೊರಡಿಸಿದ ಅಧಿಕೃತ ಜ್ಞಾಪನಾ ಪತ್ರವನ್ನು ಒಂದೇ ದಿನದಲ್ಲಿ ಹಿಂಪಡೆದಿದೆ. ಪ್ರತ್ಯೇಕ ವೇಳಾಪಟ್ಟಿ ಪ್ರಕಟಿಸಲು ಸೂಚಿಸಿದೆ. ಇಲಾಖೆಯ ಅಧಿಕೃತ ಜ್ಞಾಪನ ಪತ್ರವನ್ನು ಹಿಂಪಡೆಯಲು ಕಾರಣವೇನು ಎಂದು ಪ್ರಶ್ನಿಸಿದರು.

2024ರ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೂ ಮೊದಲೇ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮತ್ತೆ ವಿಳಂಬವಾಗುತ್ತದೆ. ಯಾವುದೇ ವಿವಾದ ಇಲ್ಲದ 908 ಅಭ್ಯರ್ಥಿಗಳಿಗೆ ತಕ್ಷಣ ಆದೇಶ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT