ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರು ಐಎಎಸ್‌ ಅಧಿಕಾರಿಗಳಿಗೆ ಹುದ್ದೆ: ರಾಜ್ಯ ಸರ್ಕಾರ ಆದೇಶ

Published 19 ಜುಲೈ 2023, 16:01 IST
Last Updated 19 ಜುಲೈ 2023, 16:01 IST
ಅಕ್ಷರ ಗಾತ್ರ

ಬೆಂಗಳೂರು: ಹುದ್ದೆ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್‌ ಅಧಿಕಾರಿಗಳಿಗೆ ಹುದ್ದೆ ತೋರಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ಆರ್‌. ವಿನೋತ್ ಪ್ರಿಯಾ ಅವರನ್ನು ನೇಮಿಸಲಾಗಿದೆ. ಉಳಿದಂತೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಡಿಯಲ್ಲಿರುವ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ನಿರ್ದೇಶಕರಾಗಿ ವಿಜಯ ಮಹಾಂತೇಶ್‌ ಬಿ.ದಾನಮ್ಮನವರ್‌, ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಸಚಿವರಾಗಿ ಪಿ.ಆರ್‌. ಶಿವಪ್ರಸಾದ್‌, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಎಸ್‌. ಆಕಾಶ್‌ ಅವರನ್ನು ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT