ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ಯತ್ನ- ಜಾರ್ಜ್‌

Published 13 ಅಕ್ಟೋಬರ್ 2023, 14:30 IST
Last Updated 13 ಅಕ್ಟೋಬರ್ 2023, 14:30 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಉಂಟಾಗಿರುವ ವಿದ್ಯುತ್‌ ಅಭಾವವನ್ನು ಸರಿಪಡಿಸಲು ಉತ್ತರ ಪ್ರದೇಶ ಸೇರಿದಂತೆ ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು. 

ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮಳೆ ಅಭಾವದಿಂದ ವಿದ್ಯುತ್‌ ಸಮಸ್ಯೆ ಸೃಷ್ಟಿಯಾಗಿದೆ. 1500 ಮೆಗಾವಾಟ್‌ನಷ್ಟು ಕೊರತೆಯಾಗಿದೆ. ಜನರು ಅಥವಾ ರೈತರು ಪ್ರತಿಭಟನೆ ಮಾಡುವುದಾದರೆ ಬಿಜೆಪಿ ಕಚೇರಿ ಮುಂದೆ ಹೋಗಿ ಪ್ರತಿಭಟಿಸಲಿ. ಇಂದಿನ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ’ ಎಂದು ದೂರಿದರು. 

ಜಾರ್ಜ್‌ ಕಾಣೆಯಾಗಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿದ ಅವರು, ‘ಜಾರ್ಜ್ ಕಾಣೆಯಾಗಿಲ್ಲ. ದೆಹಲಿಗೆ ಬಂದು ಇಂಧನ ಸಚಿವರನ್ನು ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಕೇಂದ್ರ ಗ್ರಿಡ್‌ನಿಂದ ಹೆಚ್ಚುವರಿ ವಿದ್ಯುತ್‌ ಒದಗಿಸುವಂತೆ ಒತ್ತಡ ಹೇರಿದ್ದೇನೆ’ ಎಂದರು. ನಾನು ಬಿಜೆಪಿ ಕಚೇರಿಗೆ ಹೋಗಿ ಕುಳಿತುಕೊಳ್ಳಬೇಕಾ ಅಥವಾ ಬೊಮ್ಮಾಯಿ ಮನೆಗೆ ಹೋಗಿ ಕುಳಿತುಕೊಳ್ಳಬೇಕಾ ಎಂದು ಪ್ರಶ್ನಿಸಿದರು. 

‘ಒಂದೇ ದಿನದಲ್ಲಿ ಕೊರತೆ ನೀಗಿಸಲು ಸಾಧ್ಯವಿಲ್ಲ. ವಿದ್ಯುತ್‌ ಉಪಕೇಂದ್ರಗಳಲ್ಲಿ ಸೌರಶಕ್ತಿ ಅಳವಡಿಕೆಗೆ ಕ್ರಮ ವಹಿಸಲಾಗುತ್ತಿದೆ. 1200 ಮೆಗಾವಾಟ್‌ ಸೌರ ಇಂಧನ ಉತ್ಪಾದನೆಗೆ ಟೆಂಡರ್ ಕರೆಯಲಾಗಿದೆ. ಸೌರ ಘಟಕಗಳನ್ನು ನಿರ್ಮಿಸಲು ಸರ್ಕಾರಿ ಭೂಮಿಯನ್ನು ಸಹ ಕೇಳಿದ್ದೇವೆ. ಗುತ್ತಿಗೆಗೆ ಭೂಮಿ ನೀಡುವಂತೆ ರೈತರಿಗೆ ಮನವಿ ಮಾಡಿದ್ದೇವೆ’ ಎಂದರು. 

ವಿದ್ಯುತ್ ಪೂರೈಕೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೂ ಮನವಿ ಮಾಡಿದ್ದೇವೆ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT