ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಲುವರಾಯಸ್ವಾಮಿ ರಾಜೀನಾಮೆಗೆ ಜೋಶಿ ಆಗ್ರಹ

Published 11 ಆಗಸ್ಟ್ 2023, 14:26 IST
Last Updated 11 ಆಗಸ್ಟ್ 2023, 14:26 IST
ಅಕ್ಷರ ಗಾತ್ರ

ನವದೆಹಲಿ: ಅಧಿಕಾರಿಗಳಿಂದ ಲಂಚ ಕೇಳಿರುವ ಕೃಷಿ ಸಚಿವ ಚಲುರಾಯಸ್ವಾಮಿ ಅವರಿಂದ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು. 

ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್‌.ಈಶ್ವರಪ್ಪ ಮೇಲೆ ಆರೋಪ ಬಂದ ಕೂಡಲೇ ನಾವು ರಾಜೀನಾಮೆ ಪಡೆದಿದ್ದೆವು. ಚಲುವರಾಯಸ್ವಾಮಿ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ ರಚಿಸಬೇಕು ಅಥವಾ ಪ್ರಕರಣವನ್ನು ಲೋಕಾಯುಕ್ತಕ್ಕೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT