ಸಾಮಾಜಿಕ ಕೈಂಕರ್ಯದಲ್ಲಿ ತೊಡಗಿ, ಎಲೆಮರೆಯ ಕಾಯಿಯಂತೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದ 22 ಸಾಧಕರನ್ನು ‘ಪ್ರಜಾವಾಣಿ’ ವತಿಯಿಂದ ಗುರುತಿಸಿ ಪುರಸ್ಕರಿಸಲಾಯಿತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಒಟ್ಟು 22 ಜನರಿಗೆ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.