ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲೇಬೇಕು!

Published 29 ಸೆಪ್ಟೆಂಬರ್ 2023, 14:40 IST
Last Updated 29 ಸೆಪ್ಟೆಂಬರ್ 2023, 14:40 IST
ಅಕ್ಷರ ಗಾತ್ರ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ಬಂದ್‌ ಮಾಡಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿರುವ ನಡುವೆಯೇ, ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕಕ್ಕೆ ವ್ಯತಿರಿಕ್ತವಾದ ತೀರ್ಪನ್ನು ನೀಡಿದೆ. ಈ ಕುರಿತು ಶುಕ್ರವಾರ ಚರ್ಚೆ ನಡೆಸಿದ ಸಮಿತಿಯು, ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್‌ ನೀರನ್ನು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಶಿಫಾರಸನ್ನು ಎತ್ತಿ ಹಿಡಿದಿದೆ. ಅಕ್ಟೋಬರ್‌ 15ರವರೆಗೆ ಕಾವೇರಿ ನೀರು ಹರಿಸಲು ನಿರ್ದೇಶನ ನೀಡಿದೆ. ಇತ್ತ, ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳ ವಿವರ ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT