ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿಯ ಎಂ.ನಾಗರಾಜ ಸೇರಿ 29 ಮಂದಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ

Published 26 ಡಿಸೆಂಬರ್ 2023, 9:23 IST
Last Updated 26 ಡಿಸೆಂಬರ್ 2023, 9:23 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಸೇರಿ 29 ಮಂದಿ ಪತ್ರಕರ್ತರು ಬೆಂಗಳೂರು ಪ್ರೆಸ್‌ ಕ್ಲಬ್ ಕೊಡಮಾಡುವ ‘ಪ್ರೆಸ್‌ಕ್ಲಬ್‌ ಜೀವಮಾನ ಸಾಧನೆ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾರಥ್ಯವಹಿಸಿ ಪಕ್ಷ ಅಧಿಕಾರ ವಹಿಸಲು ಕಾರಣರಾಗಿದ್ದಕ್ಕೆ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಹಿರಿಯ ರಾಜಕಾರಣಿ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ‘ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ’ ನೀಡಲಾಗುತ್ತಿದೆ.

ಪತ್ರಿಕಾ ವಿತರಕರಿಗೆ ಅಪಘಾತ ವಿಮೆ ಯೋಜನೆ ಪ್ರಕಟಿಸಿದ ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರು ‘ಪ್ರೆಸ್‌ಕ್ಲಬ್ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಸದಾಶಿವ ಶೆಣೈ. ಕೆ, ಆರ್. ಶಂಕರ್, ಕೂಡ್ಲಿ ಗುರುರಾಜ್, ಕೆ.ಕೆ ಮೂರ್ತಿ, ರೂಪಾ ಆರ್. ರಾವ್, ಸತೀಶ್‌ಕುಮಾರ್ ಬಿ.ಎಸ್, ರಾಕೇಶ್ ಪ್ರಕಾಶ್, ರಮೇಶ್ ಬಿ.ಎನ್, ಕಿರಣ್ ಹೆಚ್.ವಿ, ಚನ್ನಕೃಷ್ಣ ಪಿ.ಕೆ, ವಿಜಯ್‌ಕುಮಾರ್ ಮಲಗಿಹಾಳ್, ಮನೋಜ್‌ಕುಮಾರ್, ಮುತ್ತು. ಪಿ, ಶ್ರೀಕಂಠ ಶರ್ಮ. ಆರ್, ಸಿದ್ದೇಶ್‌ಕುಮಾರ್ ಹೆಚ್.ಪಿ, ಅಫ್ಶಾನ್ ಯಾಸ್ಮಿನ್, ಚಂದ್ರಶೇಖರ್. ಎಂ, ಭಾಸ್ಕರ್ ಕೆ.ಎಸ್, ಸುಭಾಷ್ ಹೂಗಾರ್, ಪ್ರಸನ್ನಕುಮಾರ್ ಲೂಯಿಸ್, ಶಂಕರೇಗೌಡ ಹೆಚ್.ಡಿ, ಜನಾರ್ಧನಾಚಾರಿ ಕೆ.ಎಸ್, ಲಿಂಗರಾಜು ಡಿ. ನೊಣವಿನಕೆರೆ, ಮೋಹನ್‌ರಾವ್ ಸಾವಂತ್. ಜಿ, ಅನಂತರಾಮು ಸಂಕ್ಲಾಪುರ್. ಎಲ್, ಕೌಶಿಕ್. ಆರ್, ಲಕ್ಷ್ಮಿ ಸಾಗರ ಸ್ವಾಮಿಗೌಡ, ಚಿದಾನಂದ ಪಟೇಲ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 31 ರಂದು ಬೆಳಗ್ಗೆ 11:30ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT