ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿತ್ ರಾಜಣ್ಣ ಮಾಧ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವಿಜಯಕುಮಾರ್ ಎಸ್.ಕೆ. ಆಯ್ಕೆ

Published 10 ಮೇ 2024, 11:10 IST
Last Updated 10 ಮೇ 2024, 11:10 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ ಕೊಡಮಾಡುವ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವಿಜಯಕುಮಾರ್ ಎಸ್.ಕೆ. ಅವರನ್ನು ಆಯ್ಕೆ ಮಾಡಲಾಗಿದೆ.

ಮೂಲತಃ ಹಾಸನ ಜಿಲ್ಲೆಯಯವರಾದ ವಿಜಯ್‌ಕುಮಾರ್, ಸದ್ಯ ಪ್ರಜಾವಾಣಿಯ ಚಿಕ್ಕಮಗಳೂರು ವರದಿಗಾರರಾಗಿದ್ದಾರೆ.

ಹಾಸನದ ಜ್ಞಾನದೀಪ, ಹಾಸನಮಿತ್ರ, ಜನಮಿತ್ರ, ವಿಜಯವಾಣಿ ಪತ್ರಿಕೆಗಳಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದಾರೆ.

'ಬೂದಿಯಾಗದ ಕೆಂಡ' ಇವರು ಬರೆದ ಕೃತಿ 2015ರಲ್ಲಿ ಪ್ರಕಟವಾಗಿದೆ. ಇದರಲ್ಲಿರುವ 'ಅನ್ನಕ್ಕಾಗಿ ರಾತ್ರಿಯಿಡೀ ಕಾದದ್ದು' ಎಂಬ ಲೇಖನವು ಮೈಸೂರು ವಿಶ್ವವಿದ್ಯಾನಿಲಯದ ಬಿ.ಎ ನಾಲ್ಕನೇ ಸೆಮಿಸ್ಟರ್‌ಗೆ ಪಠ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT