ಬೆಂಗಳೂರು: ತೋಟದ ಮನೆಯ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಈ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.
ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಹಾಗೂ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್ ಮಂಡಿಸಿದ ಸುದೀರ್ಘ ವಾದ ಆಲಿಸಿದ ನ್ಯಾಯಪೀಠ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿತು.