ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ದೌರ್ಜನ್ಯ: ರಾಜ್ಯಕ್ಕೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿದ ಪ್ರಜ್ವಲ್

Published 29 ಮೇ 2024, 5:10 IST
Last Updated 29 ಮೇ 2024, 5:10 IST
ಅಕ್ಷರ ಗಾತ್ರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ 31ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 

ಪ್ರಜ್ವಲ್ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗುವುದಾಗಿ ಇತ್ತೀಚೆಗಷ್ಟೇ ವಿಡಿಯೊ ಬಿಡುಗಡೆ ಮಾಡಿದ್ದರು.

ಇದರ ಬೆನ್ನಲ್ಲೇ, ಜರ್ಮನಿಯ ಮ್ಯೂನಿಕ್‌ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಬರಲಿರುವ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನದಲ್ಲಿ ಪ್ರಜ್ವಲ್‌ ಹೆಸರಿನಲ್ಲಿ ಟಿಕೆಟ್ ಕಾಯ್ದಿರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜ್ವಲ್ ರೇವಣ್ಣ ಶುಕ್ರವಾರ ರಾತ್ರಿ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT