ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್‌ ರೇವಣ್ಣ ಪ್ರಕರಣ | ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲಿ: ಕೃಷ್ಣಬೈರೇಗೌಡ

Published 9 ಮೇ 2024, 15:45 IST
Last Updated 9 ಮೇ 2024, 15:45 IST
ಅಕ್ಷರ ಗಾತ್ರ

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಇದು ವಿಶ್ವದ ಅತಿ ದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನಿವೃತ್ತ ಐಎಎಸ್‌ ಅಧಿಕಾರಿಯೊಬ್ಬರು ಇವತ್ತು ಬೆಳಿಗ್ಗೆ ದೂರವಾಣಿ ಕರೆ ಮಾಡಿ ವಿಡಿಯೊ ನೋಡಿದ ಬಳಿಕ ತಮಗೆ ವಿಪರೀತ ಮಾನಸಿಕ ಹಿಂಸೆ ಆಗಿದೆ ಎಂದು ಕಣ್ಣೀರು ಸುರಿಸಿದ್ದಾರೆ. ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ಪ್ರಕರಣವಿದು. ಇದರಲ್ಲಿ ಅನ್ಯಾಯವಾದವರಿಗೆ ಶಿಕ್ಷೆ ಆಗಲೇಬೇಕು. ತಪ್ಪಿತಸ್ಥರು ಯಾರೇ ಇರಲಿ, ಅದು ನಾನೇ ಆಗಿರಬಹುದು, ನನ್ನ ಸರ್ಕಾರವೇ ಆಗಿರಬಹುದು ಅಥವಾ ಬೇರೆ ಯಾರೇ ಆಗಿದ್ದರೂ ಸರಿ ಶಿಕ್ಷೆ ಆಗಲೇಬೇಕು. ಯಾವುದೇ ಕಾರಣಕ್ಕೂ ವಿಷಯಾಂತರ ಆಗಬಾರದು. ನನ್ನ ಗುರಿ ಮತ್ತು ಉದ್ದೇಶ ಇಷ್ಟೇ ಆಗಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT