ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ವಕೀಲ ಅರುಣ್ ಜಿ. ಅವರು ಎಸ್‌ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಧಿಕಾರಿಗಳು ನೀಡಿರುವ ನೋಟಿಸ್‌ಗೆ ಉತ್ತರ ನೀಡಿರುವ ವಕೀಲ ಅರುಣ್, ‘ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಅವರು ಸದ್ಯ ಪ್ರವಾಸದಲ್ಲಿದ್ದಾರೆ. 7 ದಿನ ಕಾಲಾವಕಾಶ ನೀಡಿ. ನಂತರ, ಮತ್ತೊಂದು ದಿನಾಂಕ ನೀಡಿ. ಅಂದು ಅವರು ವಿಚಾರಣೆಗೆ ಹಾಜರಾಗುತ್ತಾರೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.