ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮನವಿ ಮಾಡಿದ್ದಾರೆ. ವಿಡಿಯೊ ಹಗರಣ ಗೊತ್ತಿದ್ದರೂ ನೀವು ಮೈತ್ರಿ ಮಾಡಿಕೊಂಡಿದ್ದು ಮೊದಲ ತಪ್ಪು, ಅವರಿಗೆ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್ ನೀಡಿದ್ದು ಎರಡನೇ ತಪ್ಪು, ಹಗರಣ ಬೆಳಕಿಗೆ ಬಂದ ಮೇಲೆ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದು ಇನ್ನೊಂದು ತಪ್ಪು ಎಂದು ಕಿಡಿಕಾರಿದ್ದಾರೆ. ಆರೋಪಿ ಪ್ರಜ್ವಲ್ ರೇವಣ್ಣ ಭಾರತದಲ್ಲಿ ವಿಚಾರಣೆ ಎದುರಿಸಬೇಕು. ಹೀಗಾಗಿ ಕೂಡಲೇ ಅವರ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.