ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ತಂದೆ–ಮಗನ ಬಂಧನಕ್ಕೆ ಆಗ್ರಹ

Published 30 ಏಪ್ರಿಲ್ 2024, 16:18 IST
Last Updated 30 ಏಪ್ರಿಲ್ 2024, 16:18 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಎಚ್.ಡಿ. ರೇವಣ್ಣ ಮತ್ತು ಅವರ ಪುತ್ರ ಹಾಸನದ ಸಂಸದ ಪ್ರಜ್ವಲ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಮಂಗಳವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

‘ಈ ಲೈಂಗಿಕ ಹಗರಣ ರಾಜ್ಯಕ್ಕೆ ಕಳಂಕ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದ್ದರೆ, ಪ್ರಜ್ವಲ್‌ ರೇವಣ್ಣ ಎಲ್ಲೇ ಇದ್ದರೂ ಎಳೆದುಕೊಂಡು ಬಂದು ಈ ನೆಲದ ಕಾನೂನಿನಂತೆ ಶಿಕ್ಷೆ ನೀಡಬೇಕು’ ಎಂದು ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್‌ ದಾಸರಿ ಒತ್ತಾಯಿಸಿದರು.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಮಹಿಳೆಯರು ದೂರು ನೀಡಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಪ್ರಜೊಲ್ಲ ರೇಪಣ್ಣ’, ‘ಮೋದಿ ಪರಿವಾರ ದೇಶಕ್ಕೆ ಸಂಚಕಾರ’, ‘ಮೋದಿ ಮಾತನಾಡಬೇಕು’, ‘ಮೋದಿ ಉತ್ತರಿಸಿ’, ‘ಕಾಮ ಪಿಶಾಚಿ ತೊಲಗಬೇಕು’, ‘ಬಲಾತ್ಕಾರಿ ಜನತಾ ಪಕ್ಷಕ್ಕೆ ಧಿಕ್ಕಾರ’, ‘ಬ್ಲೂಜೆಪಿಗೆ ಧಿಕ್ಕಾರ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಎಎಪಿ ರಾಜ್ಯ ಉಪಾಧ್ಯಕ್ಷ ಡಾ. ರಮೇಶ್ ಬೆಳ್ಳಂಕೊಂಡ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷ ವೀಣಾ ಸರಾವು, ಬೆಂಗಳೂರು ನಗರ ಅಧ್ಯಕ್ಷ ಸತೀಶ್ ಕುಮಾರ್, ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT