ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್ ರೇವಣ್ಣನನ್ನು ಕೋರ್ಟ್‌ಗೆ ಕರೆತಂದ ಎಸ್‌ಐಟಿ ಅಧಿಕಾರಿಗಳು

Published 31 ಮೇ 2024, 8:54 IST
Last Updated 31 ಮೇ 2024, 8:54 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕರೆದುಕೊಂಡು ಬರಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ ನಡುವೆ ಅವರನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ 4ನೇ ಮಹಡಿಯಲ್ಲಿನ 42 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುತ್ತದೆ.

ಕೇಸಿನ ಡೈರಿಗಾಗಿ ಕಾಯಲಾಗುತ್ತಿದ್ದು, ಅವರನ್ನು ಮಧ್ಯಾಹ್ನ 3 ಗಂಟೆಗೆ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರುಪಡಿಸಲಾಗುವುದು. ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರು ಎಸ್ಐಟಿಯ ಪ್ರಾಥಮಿಕ ಮನವಿಯನ್ನು ವಿಚಾರಣೆ ನಡೆಸಲಿದ್ದಾರೆ.

ಪ್ರಜ್ವಲ್ ಸದ್ಯ ಪ್ರಯಾಣದ ವೇಳೆ ಧರಿಸಿದ್ದ ದಿರಿಸಿನಲ್ಲೇ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT