ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (ಕೈದಿ ನಂ. 15528) ಜೈಲಿನ ಅಧಿಕಾರಿಗಳು ಕೆಲಸ ಹಂಚಿಕೆ ಮಾಡಿದ್ದಾರೆ. ಕಾರಾಗೃಹದಲ್ಲಿರುವ ಗ್ರಂಥಾಲಯದಲ್ಲಿ ಆತನಿಗೆ ಕ್ಲರ್ಕ್ ಕೆಲಸ ನೀಡಲಾಗಿದೆ.

ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು, ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ ಎಂಬುದನ್ನು ಪುಸ್ತಕದಲ್ಲಿ ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಪ್ರಜ್ವಲ್ಗೆ ನೀಡಲಾಗಿದೆ. ಕ್ಲರ್ಕ್ ಕೆಲಸಕ್ಕೆ ಪ್ರತಿದಿನಕ್ಕೆ ₹524 ಕೂಲಿ ನಿಗದಿಪಡಿಸಲಾಗಿದೆ.

‘ಎಂಜಿನಿಯರಿಂಗ್ ಪದವೀಧರನಾಗಿರುವ ಪ್ರಜ್ವಲ್ ರೇವಣ್ಣ ಕೃಷಿ ಕೆಲಸ ಮಾಡುವುದಾಗಿ ಹೇಳಿದ್ದ’ ಎಂದು ಮೂಲಗಳು ತಿಳಿಸಿವೆ.

‘ನೋಂದಣಿ ಮಾಡಿಕೊಂಡು ಕೆಲಸ ಮಾಡಿದ ದಿನದಂದು ಕೂಲಿ ಬರಲಿದೆ. ನ್ಯಾಯಾಲಯಕ್ಕೆ ಹಾಜರಾಗಬೇಕಾದ ದಿನಗಳಂದು ಹಣ ನೀಡಲಾಗುವುದಿಲ್ಲ’ ಎಂದು ಜೈಲಿನ ಮೂಲಗಳು ತಿಳಿಸಿವೆ.

ರಾಜ್ಯದ ಕಾರಾಗೃಹಗಳಲ್ಲಿ ಕೌಶಲರಹಿತ ಕೈದಿಗಳಿಗೆ ದಿನಕ್ಕೆ ಒಟ್ಟು ₹524 ಸಂಬಳ ನಿಗದಿ ಮಾಡಲಾಗಿದೆ. ಒಂದು ವರ್ಷದ ನಂತರ, ಅವರು ನುರಿತ ಬಳಿಕ ದಿನಕ್ಕೆ ₹548 ಸಂಬಳ ನೀಡಲಾಗುತ್ತದೆ. ಎರಡು ವರ್ಷಗಳ ಅನುಭವದ ನಂತರ, ಕೌಶಲಪೂರ್ಣ ವರ್ಗಕ್ಕೆ ಬಡ್ತಿ ನೀಡಲಾಗುತ್ತದೆ. ಆಗ ಕೈದಿಗೆ ಸಿಗುವ ಸಂಬಳ ದಿನಕ್ಕೆ ₹615. ಮೂರು ವರ್ಷಗಳ ನಂತರ, ಅವರನ್ನು ಹೆಚ್ಚು ನುರಿತ ಅಥವಾ ತರಬೇತಿ ಕೆಲಸಗಾರರು ಎಂದು ಪರಿಗಣಿಸಿ ದಿನಕ್ಕೆ ₹663 ಸಂಬಳ ನೀಡಲಾಗುವುದು’ ಎಂದು ಮೂಲಗಳು ಹೇಳಿವೆ.

ಪ್ರಜ್ವಲ್ ವಿರುದ್ಧ ಸಿಐಡಿ ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಟ್ಟು ಪ್ರಕರಣಗಳು ದಾಖಲಾಗಿದ್ದವು. ಆ ಪೈಕಿ ಒಂದು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್ 2ರಂದು ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.