ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್ ರೇವಣ್ಣ ಪ್ರಕರಣ | ಎಸ್‌ಐಟಿ ತನಿಖೆ ದಿಕ್ಕು ತಪ್ಪಿದೆ: ಬಸವರಾಜ ಬೊಮ್ಮಾಯಿ

Published 12 ಮೇ 2024, 15:49 IST
Last Updated 12 ಮೇ 2024, 15:49 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ರೀತಿಯೇ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ತನಿಖೆ ದಿಕ್ಕು ತಪ್ಪುತ್ತಿದೆ' ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

'ಎಸ್‌ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರೆ, ಸಿಬಿಐಗೆ ವಹಿಸಬೇಕು' ಎಂದು ಅವರು ಭಾನುವಾರ ಸುದ್ದಿಗಾರರ ಜತೆ ಮಾತನಾಡಿ ಒತ್ತಾಯಿಸಿದರು.

ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಅವರ ವಿಚಾರಣೆಯೂ ಆಗಬೇಕು ಎಂಬ ಆಗ್ರಹದ ಕುರಿತ ಪ್ರಶ್ನೆಗೆ, ‘ಯಾರ್‍ಯಾರ ಹೆಸರು ಕೇಳಿ ಬರುತ್ತಿದೆಯೋ ಅವರ ವಿಚಾರಣೆಯನ್ನೂ ಮಾಡಲಿ. ಆದ್ದರಿಂದಲೇ ನಾವು ಪ್ರಕರಣ ಸಿಬಿಐಗೆ ಕೊಡಲಿ ಎಂದು ಕೇಳುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT