ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ರಾಪ್ತ ವಯಸ್ಸಿನವರ ಬಳಕೆ ಶಂಕೆ: ವರದಿ ಕೇಳಿದ ಮಕ್ಕಳ ಹಕ್ಕುಗಳ ಆಯೋಗ

ಲೈಂಗಿಕ ದೌರ್ಜನ್ಯ ಪ್ರಕರಣ
Published 30 ಏಪ್ರಿಲ್ 2024, 16:07 IST
Last Updated 30 ಏಪ್ರಿಲ್ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನವರನ್ನು ಬಳಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ, ಆ ಬಗ್ಗೆ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಬಿಜಯ್ ಕುಮಾರ್ ಸಿಂಗ್ ಅವರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ‍ಪತ್ರ ಬರೆದಿದೆ.

ಈ ಬಗ್ಗೆ ಆಯೋಗವು ಬಿಜಯ್ ಕುಮಾರ್ ಸಿಂಗ್ ಅವರಿಗೆ ಪತ್ರ ಬರೆದಿದೆ. ಈ ಪ್ರಕರಣದಲ್ಲಿ ಓರ್ವ ಸಂತ್ರಸ್ತೆಯು ತನ್ನ ಮಗಳೊಂದಿಗೆ ವಿಡಿಯೊ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಬಾಲಕಿಯರನ್ನೂ ಬಳಸಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಅನುಮಾನ ಮೂಡಲಾರಂಭಿಸಿದೆ. ಆದ್ದರಿಂದ ಪ್ರಕರಣದ ವಿಚಾರಣೆ ನಡೆಸಿ, ಬಾಲಕಿಯರನ್ನು ಬಳಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ವರದಿಯನ್ನು ನೀಡಿ ಎಂದು ಪತ್ರದಲ್ಲಿ ಕೋರಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT