ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್‌ ಪ್ರಕರಣ: ತ್ವರಿತ ಕೋರ್ಟ್‌ ಸ್ಥಾಪನೆಗೆ ಮನವಿ

Published 2 ಜುಲೈ 2024, 19:32 IST
Last Updated 2 ಜುಲೈ 2024, 19:32 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಹಲವು ಮಹಿಳೆಯರ ಮೇಲೆ ನಡೆದ ಅತ್ಯಾಚಾರ  ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದೆ.

ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿದ ಒಕ್ಕೂಟದ ಪ್ರಮುಖರಾದ ರೂಪ ಹಾಸನ, ಮಮತಾ, ವಿಜಯಕುಮಾರ್, ಆರ್.ಪಿ. ವೆಂಕಟೇಶ್‌ಮೂರ್ತಿ, ಧರ್ಮೇಶ್‌ ನೇತೃತ್ವದ ನಿಯೋಗ, ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಬೇಕು. ತನಿಖೆ ಆರಂಭವಾದ ದಿನದಿಂದ ಮೂರು ತಿಂಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲು ಸೂಚಿಸಬೇಕು ಎಂದು ಮನವಿ ಮಾಡಿದರು.

ಕೆಲ ಮಾಧ್ಯಮಗಳಲ್ಲಿ ಸತ್ಯಕ್ಕೆ ದೂರವಾದ ವರದಿಗಳನ್ನು ಬಿತ್ತರಿಸುತ್ತಿರುವುದರಿಂದ ಸಂತ್ರಸ್ತ ಮಹಿಳೆಯರು ಧೈರ್ಯವಾಗಿ ಮುಂದೆ ಬಂದು ವಿಚಾರಣೆ ಎದುರಿಸಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೆ ಧೈರ್ಯ ತುಂಬಬೇಕು. ಗೋಪ್ಯತೆ ಕಾಪಾಡಬೇಕು. ಹೊರಗೆ ಸುದ್ದಿ ಸೋರಿಕೆಯಾದಂತೆ ಎಚ್ಚರವಹಿಸಬೇಕು. ಸಂತ್ರಸ್ತರ ಗೋಪ್ಯತೆ ನಿಯಮಗಳನ್ನು ಪಾಲಿಸದ ಮಾಧ್ಯಮಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬೇಡಿಕೆ ಸಲ್ಲಿಸಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT