ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭವಾನಿ ರೇವಣ್ಣ ಬಂಧಿಸದಂತೆ ಹೈಕೋರ್ಟ್ ಆದೇಶ

Published 7 ಜೂನ್ 2024, 7:32 IST
Last Updated 7 ಜೂನ್ 2024, 7:32 IST
ಅಕ್ಷರ ಗಾತ್ರ

ಬೆಂಗಳೂರು: ‘ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಸಂತ್ರಸ್ತೆಯೊಬ್ಬರ ಅಪಹರಣದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್, ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

ಈ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿಕೆ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಭವಾನಿ ಪರ ಹಾಜರಿದ್ದ ಹೈಕೋರ್ಟ್‌ನ ಹಿರಿಯ ವಕೀಲ ಸಂದೇಶ್‌ ಜೆ.ಚೌಟ ಅವರ ಮನವಿ ಮೇರೆಗೆ; ಭವಾನಿ ರೇವಣ್ಣ ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಹೊರಡಿಸಿದ್ದ ವಾರಂಟ್‌ ಅನ್ನು ಅಮಾನತಿನಲ್ಲಿ ಇರಿಸಿದ ನ್ಯಾಯಪೀಠವು, ‘ಎಸ್ಐಟಿ ಭವಾನಿ ಅವರನ್ನು ಬಂಧಿಸಬಾರದು ಅಥವಾ ವಶಕ್ಕೆ ಪಡೆಯಬಾರದು’ ಎಂದು ಆದೇಶಿಸಿತು.

ಷರತ್ತುಗಳು: ‘ಭವಾನಿ ತನಿಖೆಗೆ ಸಹಕರಿಸಬೇಕು. ಸಂಜೆ 5ರ ನಂತರ ಅವರನ್ನು ವಿಚಾರಣೆಗೆಂದು ಇರಿಸಿಕೊಳ್ಳುವಂತಿಲ್ಲ. ಕೆ.ಆರ್‌.ಪುರ ತಾಲ್ಲೂಕು ಮತ್ತು ಹಾಸನ ಜಿಲ್ಲೆ ಪ್ರವೇಶಿಸುವಂತಿಲ್ಲ. ಕೋರ್ಟ್‌ ಭವಾನಿ ಅವರಿಗೆ ಪಾರಿತೋಷಕವನ್ನೇನೂ ಕೊಡುತ್ತಿಲ್ಲ. ಹೀಗಾಗಿ, ಈ ಮದ್ಯಂತರ ಜಾಮೀನು ದೊರೆತಿದೆ ಎಂದು ಅರ್ಜಿದಾರರಾಗಲೀ ಅಥವಾ ಅವರ ಬೆಂಬಲಿಗರಾಗಲೀ ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ’ ಎಂಬ ಷರತ್ತುಗಳನ್ನು ವಿಧಿಸಿತು. ‘ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ವಿಧಿಸುವ ಷರತ್ತುಗಳು ಈ ಪ್ರಕರಣಕ್ಕೂ ಅನ್ವಯಿಸುತ್ತವೆ ಎಂದು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತು.

ಈ ಮೊದಲು ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ‍ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 14 ಕ್ಕೆ ಮುಂದೂಡಿದೆ. ವಿಶೇಷ ಪ್ರಾಸಿಕ್ಯೂಟರ್ ಆದ ಹಿರಿಯ ವಕೀಲ ರವಿವರ್ಮ ಕುಮಾರ್ ಮತ್ತು ರಾಜ್ಯ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌ ಹಾಜರಿದ್ದರು.ಬೆಂಗಳೂರು: ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಸಂತ್ರಸ್ತೆಯೊಬ್ಬರ ಅಪಹರಣದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನು ಬಂಧಿಸದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದ ಬೆನ್ನಲ್ಲೇ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯನ್ನು, ‘ಶಾಸಕರು – ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಹೈಕೋರ್ಟ್‌ನ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಷರತ್ತುಗಳು: 'ಭವಾನಿ ತಕ್ಷಣವೇ ಎಸ್ಐಟಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಪೊಲೀಸರು ಅವರನ್ನು ಬಂಧಿಸಬಾರದು. ಸಂಜೆ 5 ಗಂಟೆಯ ಒಳಗೆ ವಿಚಾರಣೆ ಮುಗಿಸಿ ಅವರನ್ನು ಕಳುಹಿಸಿಕೊಡಬೇಕು. ಭವಾನಿ ಅವರು ಕೆ.ಆರ್.ನಗರ ಮತ್ತು ಹಾಸನ ಜಿಲ್ಲೆ ಪ್ರವೇಶಿಸಬಾರದು' ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.

ವಿಚಾರಣೆಯನ್ನು ಇದೇ 14 ಕ್ಕೆ ಮುಂದೂಡಲಾಗಿದೆ. ಭವಾನಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ವಿಶೇಷ ಪ್ರಾಸಿಕ್ಯೂಟರ್ ಆದ ಹಿರಿಯ ವಕೀಲ ರವಿವರ್ಮ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT