ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣ: ವಿಚಾರಣೆ ಇದೇ 12ಕ್ಕೆ ಮುಂದೂಡಿಕೆ

Published 10 ಜೂನ್ 2024, 15:52 IST
Last Updated 10 ಜೂನ್ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಇದೇ 12ಕ್ಕೆ ಮುಂದೂಡಿದೆ.

ಈ ಸಂಬಂಧ ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ’ದ (ಕೆಆರ್‌ಎಸ್‌ಪಿ) ಉಪಾಧ್ಯಕ್ಷ ಎಸ್‌.ಎಚ್‌.ಲಿಂಗೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಯು, ಸೋಮವಾರ ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು. ಆದರೆ, ಕಾಲಾವಕಾಶದ ಕೊರತೆಯ ಕಾರಣ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಲಾಯಿತು.

ಪ್ರಕರಣದಲ್ಲಿ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ, ಎಸ್ಐಟಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ, ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಮತ್ತು ಬಿಜೆಪಿ ಮುಖಂಡ ಹಾಗೂ ವಕೀಲ ಜಿ.ದೇವರಾಜೇಗೌಡ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಏನಿದು ಅರ್ಜಿ?: ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್‌ಎಸ್‌ ಪಕ್ಷವು, ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಆದರೆ, ಹೊಳೆನರಸೀಪುರ ಪೊಲೀಸರು, ‘ಈಗಾಗಲೇ ದೂರು ದಾಖಲಾಗಿದ್ದು, ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ’ ಎಂಬ ಹಿಂಬರಹ ನೀಡಿದ್ದರು. ‘ಈ ಹಿಂಬರಹವನ್ನು ರದ್ದುಪಡಿಸಿ ದೂರು ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಕೆಆರ್‌ಎಸ್‌ಪಿ ಈ ಅರ್ಜಿ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT