‘ಅಪಹರಣ ಕೃತ್ಯದಲ್ಲಿ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರೂ ಭಾಗಿಯಾಗಿರುವ ಮಾಹಿತಿ ಇದೆ. ಹೀಗಾಗಿ, ಅವರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ. ರೇವಣ್ಣ ಬಂಧನ ಹಿನ್ನೆಲೆಯಲ್ಲಿ ಅರಮನೆ ರಸ್ತೆಯಲ್ಲಿರುವ ಕಾರ್ಲ್‌ಟನ್ ಕಟ್ಟಡದಲ್ಲಿರುವ ಎಸ್‌ಐಟಿ ಕಚೇರಿ ಸುತ್ತಮುತ್ತ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.