ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ | ದೇವೇಗೌಡರ ಕುಟುಂಬ ರಾಜಕೀಯ ಬಿಡಲಿ: ಮೊಯ್ಲಿ

Published 2 ಮೇ 2024, 12:34 IST
Last Updated 2 ಮೇ 2024, 12:34 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಎಚ್‌.ಡಿ.ದೇವೇಗೌಡ ಹಾಗೂ ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ರಾಜಕೀಯ ಬಿಡಬೇಕು’ ಎಂದು ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಆಗ್ರಹಿಸಿದರು.

‘ವಿಡಿಯೊ ಬಿಡುಗಡೆಯಲ್ಲಿ ಯಾರ ಪಾತ್ರವಿದೆ ಎಂಬುದು ಮುಖ್ಯವಲ್ಲ. ಯಾರು ತಪ್ಪು ಮಾಡಿದ್ದಾರೆ ಎಂಬುದು ಮುಖ್ಯ. ಇದು ಸಮಾಜವೇ ತಲೆತಗ್ಗಿಸುವ ಕೆಲಸ. ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊರಬೇಕು’ ಎಂದು ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದರು.

‘ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಯಬೇಕು. ಅದರಿಂದ ಎಲ್ಲ ಧರ್ಮಗಳ, ಜಾತಿಗಳ ಜನರಿಗೆ ಯೋಜನೆಗಳ ಸೌಲಭ್ಯಗಳು ತಲುಪುತ್ತವೆ. 2021ರಲ್ಲಿ ಮೋದಿ ಸರ್ಕಾರ ಜನಗಣತಿ ನಡೆಸಲಿಲ್ಲ. ಇದೇ ಕಾರಣದಿಂದ 10 ಕೋಟಿ ಜನ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದರಲ್ಲಿ ಹೆಚ್ಚಾಗಿ ಹಿಂದುಳಿದ ವರ್ಗದವರೇ ಇದ್ದಾರೆ’ ಎಂದರು.

‘ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಒಂದು ದೇಶ, ಒಂದು ಚುನಾವಣೆ ಮತ್ತು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬಹುದು. 2029ರಲ್ಲಿ ಚುನಾವಣೆಯೇ ನಡೆಯುವುದಿಲ್ಲ ಎಂಬ ಭಯವೂ ನಮಗಿದೆ’ ಎಂದರು.

ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ವೀರಪ್ಪ ಮೊಯ್ಲಿ (ಮಧ್ಯದಲ್ಲಿರುವವರು)

ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ವೀರಪ್ಪ ಮೊಯ್ಲಿ (ಮಧ್ಯದಲ್ಲಿರುವವರು)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT