ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ಏಕೆ ರದ್ದುಗೊಳಿಸಲಿಲ್ಲ: ಜೈರಾಮ್ ರಮೇಶ್

Published 11 ಮೇ 2024, 8:49 IST
Last Updated 11 ಮೇ 2024, 8:49 IST
ಅಕ್ಷರ ಗಾತ್ರ

ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಹೊಂದಿರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಪಡಿಸಲು ಅಡ್ಡಿ ಏನು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು ಕೇಂದ್ರ ಸರ್ಕಾರವನ್ನು ಶನಿವಾರ ಪ್ರಶ್ನಿಸಿದ್ದಾರೆ. 

ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ಪ್ರಜ್ವಲ್ ಅವರು ಜರ್ಮನಿಗೆ ತೆರಳಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ಅವರಿಗೆ ದೇಶದಿಂದ ಹೊರಗಡೆ ತೆರಳಲು ಅವಕಾಶ ಕಲ್ಪಿಸಿದ್ದು ಹೇಗೆ ಎಂದು ರಮೇಶ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಪ್ರಶ್ನಿಸಿದ್ದಾರೆ.

‘ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಪ್ರಧಾನಿಯವರಿಗೆ ಅಡ್ಡಿಯಾಗಿರುವುದು ಏನು? ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರಿಗೆ ಅವಕಾಶ ನೀಡಿದ ರೀತಿಯಲ್ಲಿಯೇ ಪ್ರಜ್ವಲ್ ಅವರಿಗೆ ದೇಶದಿಂದ ಪರಾರಿಯಾಗಲು ಅವಕಾಶ ನೀಡಿದ್ದು ಹೇಗೆ ಮತ್ತು ಏಕೆ’ ಎಂದು ರಮೇಶ್ ಅವರು ಪ್ರಶ್ನೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT