ಮೈಸೂರು: ‘ಯಾರಿಗೆ ದುರಹಂಕಾರ ಇರುತ್ತದೆಯೋ ಹಾಗೂ ಮಾಹಿತಿ ಇರುವುದಿಲ್ಲವೋ ಅದಕ್ಕೆ ಔಷಧವನ್ನು ನಮ್ಮ ದೇಶದಲ್ಲಿ ಇನ್ನೂ ಕಂಡು ಹಿಡಿದಿಲ್ಲ. ರಾಹುಲ್ ಗಾಂಧಿ ಅವರ ಸಮಸ್ಯೆಯೂ ಅದೇ’ಎಂದು ಕೇಂದ್ರ ಕಲ್ಲಿದ್ದಲು ಮತ್ತುಗಣಿ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದರು.

ಸುತ್ತೂರು ಮಠದಲ್ಲಿ ಶನಿವಾರ ಸಂಜೆ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಡೀ ಜಗತ್ತಿನಲ್ಲೇ ಭಾರತದ ಕೋವಿಡ್ ಲಸಿಕೆ ಕಾರ್ಯಕ್ರಮ ಅತ್ಯಂತ ದೊಡ್ಡದು. ಈವರೆಗೆ 35 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಜುಲೈನಲ್ಲಿ 12 ಕೋಟಿ ಜನರಿಗೆ ಲಸಿಕೆ ನೀಡುವುದಾಗಿ ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ. 15 ದಿನಗಳ ಬಳಿಕ ರಾಹುಲ್ ಗಾಂಧಿ ಮಾತನಾಡಲಿ’ ಎಂದು ಸಲಹೆ ನೀಡಿದರು.

‘ಜು.19ರಿಂದ ಮಳೆಗಾಲದ ಅಧಿವೇಶನ ನಡೆಯಲಿದ್ದು, ಒಟ್ಟು 20 ಪ್ರಮುಖ ಮಸೂದೆಗಳ ಬಗ್ಗೆ ಚರ್ಚೆಯಾಗಬೇಕಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.