ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನ ಗ್ಯಾಲರಿ 4ರಲ್ಲಿ ಇದೇ 30ರಿಂದ ನ.2ರವರೆಗೆ ರಂಗಕರ್ಮಿ ಪ್ರಸನ್ನ ಅವರ ಕಲಾಕೃತಿಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

‘ನಾಟಕವು ಬದುಕಿನೊಳಗೋ ಬದುಕು ನಾಟಕದೊಳಗೋ’ ಶೀರ್ಷಿಕೆಯಡಿ ಈ ಪ್ರದರ್ಶನ ನಡೆಯಲಿದೆ. 30ರ ಸಂಜೆ 4 ಗಂಟೆಗೆ ಕಲಾ ವಿಮರ್ಶಕ ರವೀಂದ್ರ ತ್ರಿಪಾಠಿ ಅವರು ಈ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ.

ಲೇಖಕ ಅರುಣ್ ರಾಮನ್, ದೂರದರ್ಶನ ಚಂದನದ ಕಾರ್ಯಕ್ರಮ ವಿಭಾಗದ ಮುಖ್ಯಸ್ಥೆ ಎಚ್.ಎನ್. ಆರತಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಪ್ರಸನ್ನ ಅವರು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.