ರಾಯಚೂರು: ಶಾಸಕ ಆನಂದ ಸಿಂಗ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಂತೆಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸೋಮವಾರ ದಿಢೀರ್ ಬೆಂಗಳೂರಿಗೆ ತೆರಳಿದರು.

‘ಸರ್ಕಾರ ಬೀಳಿಸುವುದಕ್ಕೆ ಬಿಜೆಪಿ ನಾಯಕರು ಮತ್ತೆ ತೆರೆಮರೆಯ ಪ್ರಯತ್ನ ಆರಂಭಿಸಿರುವ ಸಾಧ್ಯತೆಗಳು ಕಾಣುತ್ತಿವೆ. ಬಿಜೆಪಿ ಪರ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರಿಸುವುದು ನಿಚ್ಚಳವಾದರೆ ಶಾಸಕ ಪ್ರತಾಪಗೌಡ ಪಾಟೀಲ ಅವರು ಬುಧವಾರ ರಾಜೀನಾಮೆ ಸಲ್ಲಿಸಲಿದ್ದಾರೆ’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಪ್ರತಾಪಗೌಡ ಪಾಟೀಲ ‘ಕಚೇರಿ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳುತ್ತಿದ್ದೇನೆ.ಶಾಸಕ ಆನಂದ ಸಿಂಗ್ ಅವರ ರಾಜೀನಾಮೆ ವಿಷಯ ನನಗೆ ತಿಳಿದಿಲ್ಲ.ರಾಜ್ಯದಲ್ಲಿ ಒಂದೆರಡು ದಿನಗಳಲ್ಲಿ ಏನೇನು ಬೆಳವಣಿಗೆ ಆಗುತ್ತದೆ ಎಂಬುದನ್ನು ಕಾದು ನೋಡಿ ಮುಂದಿನ ನಿರ್ಧಾರತೆಗೆದುಕೊಳ್ಳುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.