ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಾಪ್‌ ಸಿಂಹನ ತಮ್ಮ ವಿಕ್ರಮ್ ಮರಗಳ್ಳತನದಲ್ಲಿ ತೊಡಗಿದ್ದಾನೆ: ಕಾಂಗ್ರೆಸ್‌ ಆರೋಪ

Published 24 ಡಿಸೆಂಬರ್ 2023, 6:19 IST
Last Updated 24 ಡಿಸೆಂಬರ್ 2023, 6:19 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಾಪ್‌ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಬಗ್ಗೆ ಕಾಂಗ್ರೆಸ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಪ್ರತಾಪ್‌ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುದ್ದಾರೆ. ಇಲ್ಲಿನ ತಹಸೀಲ್ದಾರ್ ಮಮತಾ ಅವರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಪ್ರಕರಣದಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಘಟನೆ ಬಗ್ಗೆ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ಕಾಂಗ್ರೆಸ್‌ ತಿಳಿಸಿದೆ. 

ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT