ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಪತ್ತೆಗೆ ಸಾರ್ವಜನಿಕರಿಂದ ಮಾಹಿತಿ ಕೋರಿದ NIA

Published 15 ಡಿಸೆಂಬರ್ 2023, 16:54 IST
Last Updated 15 ಡಿಸೆಂಬರ್ 2023, 16:54 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಐವರು ಆರೋಪಿಗಳ ಕುರಿತಂತೆ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಈ ಕುರಿತಂತೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಎನ್‌ಐಎ, ಆರೋಪಿಗಳ ಬಂಧನಕ್ಕೆ ಅಗತ್ಯವಾದ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಜೊತೆಗೆ, ಮಾಹಿತಿದಾರರ ವಿವರವನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.

ಮೊಹಮ್ಮದ್ ಮುಸ್ತಫಾ, ಮಸೂದ್ ಅಗ್ನಾಡಿ, ಮೊಹಮ್ಮದ್ ಷರೀಫ್ ಕೊಡಾಜೆ, ಉಮ್ಮರ್ ಆರ್ ಮತ್ತು ಅಬೂಬಕರ್ ಸಿದ್ದಿಕ್ ಎಂಬ ಹೆಸರಿನ ಆರೋಪಿಗಳ ಕುರಿತು ಎಎನ್‌ಐ ಮಾಹಿತಿ ಕೋರಿದೆ. ಮಾಹಿತಿ ಕಳುಹಿಸಲು +919497715294 ವಾಟ್ಸ್‌ಆ್ಯಪ್‌ ಸಂಖ್ಯೆಯನ್ನು ಎನ್‌ಐಎ ನೀಡಿದೆ.

2022ರ ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT