ಬೆಂಗಳೂರು: ರಾಜ್ಯದಲ್ಲಿ ಕಳೆದ ಎಂಟು ತಿಂಗಳಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಕಾಂಗ್ರೆಸ್ ಸರ್ಕಾರ ಮಹಿಳೆಯರ ಕಗ್ಗೊಲೆ ಮಾಡಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ಸಾವಿಗೀಡಾಗುತ್ತಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ‘ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಸ್ವಾಭಿಮಾನಿ ಸಮಾವೇಶ, ಸಂಪುಟ ಪುನಾರಚನೆ ಎಂದು ರಾಜಕೀಯದಾಳ ಎಸೆಯುವಲ್ಲಿ ತಾವು ತೋರುತ್ತಿರುವ ಆಸಕ್ತಿಯಲ್ಲಿ ಸ್ವಲ್ಪವಾದರೂ ಆಡಳಿತದಲ್ಲಿ ತೋರಿಸಿ. ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ಕುಟುಂಬದ ಮಹಿಳೆಯರಿಗೆ ಜೀವಂತವಾಗಿ ಮನೆಗೆ ಹೋಗುವ ಗ್ಯಾರಂಟಿ ಕೊಡಿ. ತಾಯಿ–ಮಗು ಇಬ್ಬರು ಸುರಕ್ಷಿತವಾಗಿ ಮನೆ ಸೇರುವ ಗ್ಯಾರಂಟಿ ಕೊಡಿ ಎಂದು ಅವರು ಹೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಎಸ್. ಪ್ರಕಾಶ ಪಾಟೀಲ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ. ಬಾಣಂತಿ ಮಹಿಳೆಯರ ಸರಣಿ ಸಾವಿನ ಬಗ್ಗೆ ತಜ್ಞ ವೈದ್ಯರ ತನಿಖಾ ತಂಡ ನೀಡಿರುವ ವರದಿಯನ್ನು ಬಹಿರಂಗ ಮಾಡಿ. ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸಿ ಎಂದು ಅಶೋಕ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.