ಉಡುಪಿ: ಪೇಜಾವರ ಶ್ರೀಗಳ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ ಕೋವಿಂದ್‌ಅವರು ಗುರುವಾರ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.

ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆದಿ ಉಡುಪಿಯ ಹೆಲಿಪ್ಯಾಡ್‌ಗೆ ಬಂದಿಳಿದ ರಾಷ್ಟ್ರಪತಿಗಳನ್ನು ರಾಜ್ಯಪಾಲ ವಾಜುಭಾಯಿ ವಾಲಾ ಸ್ವಾಗತಿಸಿದರು. ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಉಪಸ್ಥಿತರಿದ್ದರು.

ಬಳಿಕ ಪೇಜಾವರ ಮಠಕ್ಕೆ ಭೇಟಿನೀಡಿದ ರಾಷ್ಟ್ರಪತಿಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ವೇಳೆ ರಾಷ್ಟ್ರಪತಿಗಳಿಗೆ ಶ್ರೀಕೃಷ್ಣನ ಮೂರ್ತಿಯನ್ನೊಳಗೊಂಡ ಪ್ರಭಾವಳಿಯನ್ನು ನೀಡಲಾಯಿತು. ಕೆಲವು ನಿಮಿಷ ಸ್ವಾಮೀಜಿಯ ಜತೆ ಉಭಯ ಕುಶಲೋಪರಿ ನಡೆಸಿದ ರಾಷ್ಟ್ರಪತಿಗಳು ಬಳಿಕ ಶ್ರೀಕೃಷ್ಣ ಮಠದಲ್ಲಿ ಕೃಷ್ಣನ ದರ್ಶನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.