ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಬರ್ ಕ್ರೈಂ ತಡೆ: ಶೀಘ್ರ ಆದೇಶ- ಗೃಹ ಸಚಿವ ಜಿ. ಪರಮೇಶ್ವರ

Published 11 ಮಾರ್ಚ್ 2024, 16:33 IST
Last Updated 11 ಮಾರ್ಚ್ 2024, 16:33 IST
ಅಕ್ಷರ ಗಾತ್ರ

ಬೆಂಗಳೂರು: ‘ಸುಳ್ಳು ಸುದ್ದಿ ಹರಡುವುದು, ಫೋಟೊ ಮತ್ತು ವಿಡಿಯೊಗಳನ್ನು ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಸೈಬರ್ ಕ್ರೈಂ ಪ್ರಕರಣಗಳಿಗೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕೆಂದು ಇನ್ನೆರಡು ದಿನಗಳಲ್ಲಿ ಆದೇಶ‌ ಹೊರಡಿಸಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಸೈಬರ್ ಕ್ರೈಂ ವಿಷಯಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯ ಬಳಿಕ ಅವರು ಮಾತನಾಡಿದರು.

‘ಹಿರಿಯ ಪೊಲೀಸ್‌ ಅಧಿಕಾರಿ ಮುಖ್ಯಸ್ಥರಾಗಿರುವ ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ನೋಡಲ್ ಅಧಿಕಾರಿಯನ್ನು ನೇಮಿಸಿ, ಹೆಚ್ಚಿನ ಜವಾಬ್ದಾರಿ ನೀಡಲಾಗುವುದು. ಅವರು ಡಿಜಿ ಮತ್ತು ಐಜಿಪಿ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಲಿದ್ದಾರೆ’ ಎಂದು ವಿವರಿಸಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT