ಬೆಂಗಳೂರು: ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಸಹಕಾರ ಚಳುವಳಿ ನಡೆಸಲು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿರ್ಧರಿಸಿದೆ.

ಅ. 4ರಿಂದ ತರಬೇತಿ ಬಹಿಷ್ಕಾರ ಮುಂದುವರಿಸಿರುವ ಪ್ರಾಥಮಿಕ ಶಾಲಾ ಶಿಕ್ಷಕರು, ಇದೇ 21 ಮತ್ತು 29ರಂದು ಕಪ್ಪ ಪಟ್ಟಿ ಧರಿಸಿ ಶೈಕ್ಷಣಿಕ ಚಟುವಟಿಕೆ ನಿರ್ವಹಿಸಲಿದ್ದಾರೆ. ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಅ. 30ರಿಂದ ನ. 10ರವರೆಗೆ ಮಧ್ಯಾಹ್ನದ ಬಿಸಿಯೂಟ ಮಾಹಿತಿ ಅಪ್‌ಡೇಟ್ ಮಾಡದಿರಲು, 11ರಿಂದ 18ರವರೆಗೆ ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ (ಎಸ್‌ಎಟಿಎಸ್) ಪೋರ್ಟಲ್‌ನಲ್ಲಿ ಮಾಹಿತಿ ಅಪ್‌ಡೇಟ್ ಮಾಡದಿರಲು ಸಂಘ ನಿರ್ಧರಿಸಿದೆ. ಆ ಬಳಿಕವೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ರಾಜ್ಯಮಟ್ಟದಲ್ಲಿ ರ‍್ಯಾಲಿ, ಧರಣಿ ಸತ್ಯಾಗ್ರಹ, ತರಗತಿ ಬಹಿಷ್ಕಾರ, ಶಾಲಾ ಬಹಿಷ್ಕಾರದಂಥ ಹೋರಾಟ ನಡೆಸಲು ಸಂಘ ಮುಂದಾಗಿದೆ.

ಮುಖ್ಯ ಶಿಕ್ಷಕರಿಗೆ 15,20, 25 ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆಯನ್ನೂ ಬಗೆಹರಿಸಬೇಕು ಎಂದೂ ಸಂಘ ಬೇಡಿಕೆ ಇಟ್ಟಿದೆ.

‘ಇದೇ 21ರಂದು ತಾಲ್ಲೂಕುಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಹಾಗೂ 25ರಂದು ಜಿಲ್ಲಾಮಟ್ಟದಲ್ಲಿ ಉಪ ನಿರ್ದೇಶಕರ ಮೂಲಕ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಗುವುದು. ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಶಂಭುನಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಿ ತಿಳಿಸಿದ್ದಾರೆ.

‘ಹಲವು ವರ್ಷಗಳಿಂದ ಅದರಲ್ಲೂ ಕಳೆದ ಮೂರು ತಿಂಗಳುಗಳ ಹಿಂದೆಯೇ ಕಾಲಮಿತಿಯಲ್ಲಿ ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ನಾವು ಮನವಿ ಮಾಡಿದ್ದೆವು. ಬೇಡಿಕೆಗಳು ಈಡೇರದೇ ಇರುವುದರಿಂದ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯತೆ ಎದುರಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.