ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರಿಗೆ ಹೆಚ್ಚುವರಿಯಾಗಿ ಮೂಲಸೌಲಭ್ಯ ಅಭಿವೃದ್ಧಿ ಖಾತೆಯನ್ನು ಹಂಚಿಕೆ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.

ಅಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಜೈವಿಕ ತಂತ್ರಜ್ಞಾನ (ಬಿಟಿ) ಖಾತೆಯನ್ನೂ ನೀಡಲಾಗಿದೆ.

ಇದೇ 28ರಂದು ಎಲ್ಲ ಸಚಿವರಿಗೆ ಖಾತೆಗಳನ್ನು ಹಂಚಲಾಗಿತ್ತು. ಆಗ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಐಟಿ ಬಿಟಿ ಖಾತೆಯನ್ನು ಮುಖ್ಯಮಂತ್ರಿ ವಹಿಸಿಕೊಂಡಿದ್ದರು. ಪರಿಷ್ಕೃತ ಖಾತೆ ಹಂಚಿಕೆ ಅಧಿಸೂಯಚನೆ ಪ್ರಕಾರ ಮುಖ್ಯಮಂತ್ರಿಯವರು ಆರ್ಥಿಕ, ಸಂಪುಟ ಸಚಿವಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಮತ್ತು ಹಂಚಿಯಾಗದ ಇತರ ಖಾತೆಗಳ ಹೊಣೆ ನಿಭಾಯಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.