ಬೆಂಗಳೂರು: ‘ನಾವು ಬೀದಿಗೆ ಇಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತದೆ. ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದರು.

‘ಸುಪಾರಿ ಕೊಟ್ಟಿದ್ದಾರೆ’ ಎಂಬ ಬಿ.ವೈ. ವಿಜಯೇಂದ್ರ ಹೇಳಿಕೆ ವಿಚಾರವಾಗಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಪ್ರಿಯಾಂಕ್, ‘ನಿಮ್ಮ ತಂದೆ ಏನು ಮಾಡಿದ್ದಾರೆ? ಪೂಜ್ಯ ತಂದೆ ಅಂದುಬಿಟ್ಟ ಮಾತ್ರಕ್ಕೆ ಪೂಜ್ಯ ಆಗುವುದಿಲ್ಲ. ನಾವು ಬುದ್ದ, ಬಸವ, ಅಂಬೇಡ್ಕರ್ ಮೇಲೆ ನಂಬಿಕೆ ಇಟ್ಟವರು’ ಎಂದರು.

‘ಅಧ್ಯಕ್ಷ ಸ್ಥಾನಕ್ಕೆ ಗೌರವ ಕೊಡುತ್ತೇವೆ ಅಂದ ಮಾತ್ರಕ್ಕೆ ಬಾಯಿಗೆ ಬಂದಂತೆ ಮಾತನಾಡುವುದಲ್ಲ’ ಎಂದೂ ವಾಗ್ದಾಳಿ ನಡೆಸಿದರು.

‘ಪ್ರತಿಭಟನೆಗೆ ಬರುವಂತೆ ಮೃತ ಗುತ್ತಿಗೆದಾರ ಸಚಿನ್ ಪಾಂಚಾಳ ಕುಟುಂಬದವರಿಗೆ ಬಿಜೆಪಿಯವರು ಬಲವಂತ ಮಾಡುತ್ತಿದ್ದಾರೆ. ಪದೇ ಪದೇ ಸರ್ಕಾರದ ವಿರುದ್ದ ಹೇಳಿಕೆ ಕೊಡಿಸುತ್ತಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ತನಿಖೆ ಆರಂಭವಾಗಿ ಎರಡು ದಿನ ಆಗಿದೆ. ಈಗಾಗಲೇ ಮಹಜರು ಮಾಡಿದ್ದಾರೆ. ಪಾರದರ್ಶಕವಾಗಿ ತನಿಖೆ ನಡೆಸುವುದು ಸರ್ಕಾರದ ಕರ್ತವ್ಯ. ಸಿಬಿಐಗೆ ವಹಿಸಬೇಕೆಂದು ಬಿಜೆಪಿಯವರು ಹೇಳಿದಾಗಲೆಲ್ಲ ಕೇಳಲು ಆಗುವುದಿಲ್ಲ’ ಎಂದರು.

‘ಗಂಗಾ ಕಲ್ಯಾಣ ಹಗರಣ, ಪಿಎಸ್ಐ ನೇಮಕಾತಿ ಹಗರಣವನ್ನು ಬಿಜೆಪಿಯವರು ಸಿಬಿಐಗೆ ಕೊಟ್ಟಿದ್ದಾರೆಯೇ? ಅವರ ಅವಧಿಯಲ್ಲಿ ಎಷ್ಟು ಕೇಸ್ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ? ಮಾನವ ಸಂಪನ್ಮೂಲ ಇಲ್ಲ, ಸುಮ್ಮನೆ ವಹಿಸಬೇಡಿ ಎಂದು ಸಿಬಿಐನವರೇ ಹೇಳಿದ್ದಾರೆ. ಬಿಜೆಪಿಯವರ ಸ್ಕ್ರಿಪ್ಟ್ಗೆ ಕುಣಿಯಲು ಆಗುತ್ತದೆಯೇ? ಪ್ರತಿಪಕ್ಷದಲ್ಲಿ ಇರುವವರು ಜವಾಬ್ದಾರಿಯುತವಾಗಿ ಇರಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.