ಬೆಂಗಳೂರು: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ನೈಜತೆ ಪರಿಶೀಲಿಸಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಮಕ್ಷಮದಲ್ಲಿ ದೇಶ–ವಿದೇಶಗಳ ತಜ್ಞರ ಮೂಲಕ ‘ನೈತಿಕ ಹ್ಯಾಕಥಾನ್’ಗೆ ಅವಕಾಶ ಮಾಡಿಕೊಡಬೇಕು ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಚುನಾವಣಾ ಆಯೋಗವನ್ನು ಕೋರಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಯಂತ್ರಗಳ ಬದಲಿಗೆ ಮತ ಪತ್ರಗಳ ಮೂಲಕ ಮತ ಚಲಾಯಿಸುವುದನ್ನು ಮರು ಪರಿಚಯಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಯನ್ನು ವಿಧಾನಪರಿಷತ್ನಲ್ಲಿ ಮಂಡಿಸಿ ಅವರು ಮಾತನಾಡಿದರು.

‘ಜಗತ್ತಿನ ಸಿಲಿಕಾನ್ ವ್ಯಾಲಿಯಲ್ಲಿಯೇ ಇವಿಎಂ ಮೂಲಕ ಮತದಾನ ನಡೆಯುತ್ತಿಲ್ಲ. ಮುಂದುವರಿದ ದೇಶಗಳೇ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಸಂಶಯ ಹೊಂದಿದ್ದು ಮತ್ತೆ ಮತಪತ್ರದ ಮೂಲಕ ಚುನಾವಣೆ ನಡೆಸುತ್ತಿವೆ. ಇವಿಎಂ ಅನ್ನು ವಿವಿಧಡೆ ಹೇಗೆ ಹ್ಯಾಕ್ ಮಾಡಲಾಗುತ್ತಿದೆ ಎನ್ನುವ ಕುರಿತು ಪ್ರಾತ್ಯಕ್ಷಿಕೆ ನಡೆಸಲು ಆಯೋಗ ವೇದಿಕೆ ಕಲ್ಪಿಸಬೇಕು. ಆಗ ಸತ್ಯ ದೇಶದ ಜನರಿಗೆ ತಿಳಿಯಲಿದೆ’ ಎಂದರು.

ಪ್ರಿಯಾಂಕ್ ಖರ್ಗೆ ಅವರ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿಯ ಸಿ.ಟಿ.ರವಿ, ‘ನಾವೆಲ್ಲ ಸಭಾತ್ಯಾಗ ಮಾಡುತ್ತೇವೆ’ ಎಂದು ಹೇಳಿ ಹೊರಟರು.

ಆದರೆ, ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಉಳಿದವರು ತಮ್ಮ ಆಸನ ಬಿಟ್ಟು ಮೇಲೇಳಲಿಲ್ಲ. ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಆಕ್ಷೇಪಗಳನ್ನು ವ್ಯಕ್ತಪಡಿಸಿದ ನಂತರ ವಿರೋಧ ಪಕ್ಷಗಳ ಸದಸ್ಯರ ಜತೆ ಸಭಾತ್ಯಾಗ ಮಾಡಿದರು.

ಬಿಜೆಪಿ–ಜೆಡಿಎಸ್ ಸದಸ್ಯರ ತೀವ್ರ ವಿರೋಧ, ಸಭಾತ್ಯಾಗದ ನಡುವೆ ಮಸೂದೆ ಅಂಗೀಕಾರವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.