ಬೆಂಗಳೂರು: 'ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆಯನ್ನು 'ಮುಖ್ಯಮಂತ್ರಿ ಮೋದಿ' ಅವರಿಗಿಂತ ಚೆನ್ನಾಗಿ ಬೇರೆ ಯಾರು ಬಯಲು ಮಾಡಲು ಸಾಧ್ಯವಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು (ಬುಧವಾರ) ಆರೋಪಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಭಯೋತ್ಪಾದನೆ ಕುರಿತು ನೀಡಿದ್ದ ಹೇಳಿಕೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ.

'ಪ್ರಧಾನಿ ಪಾಲಿಗೆ ಹೊಣೆಗಾರಿಕೆ ಎಂಬುದು ಇತರರಿಗೆ ಮಾತ್ರ ಅನ್ವಯಿಸುತ್ತದೆ. ವಿರೋಧ ಪಕ್ಷದಲ್ಲಿದ್ದಾಗ ಹೊಣೆಗಾರಿಕೆ ಬಗ್ಗೆ ಮಾತನಾಡುವ ಪ್ರಧಾನಿ ಅಧಿಕಾರದಲ್ಲಿದ್ದಾಗ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.

'ಪ್ರಧಾನಿ ಮೋದಿ ಒಬ್ಬ ಪಲಾಯನವಾದಿ. ಸುದ್ದಿಗೋಷ್ಠಿಯಿಂದ ತಪ್ಪಿಸಿಕೊಳ್ಳುತ್ತಾರೆ, ಸಂಸತ್ತನ್ನು ಕಡೆಗಣಿಸುತ್ತಾರೆ. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ವಿಷಯಾಂತರ ಮಾಡುತ್ತಾರೆ' ಎಂದು ಟೀಕಿಸಿದ್ದಾರೆ.
.RSS ಕಾರ್ಯಕ್ರಮವಾಗಲಿ, ನಮಾಜ್ ಆಗಲಿ ಎಲ್ಲರಿಗೂ ಒಂದೇ ನಿಯಮ: ಪ್ರಿಯಾಂಕ್ ಖರ್ಗೆ.ರಾಷ್ಟ್ರಧ್ವಜಕ್ಕೆ RSS ಅಗೌರವ ತೋರಿ 100 ವರ್ಷ: ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.