ಬೆಂಗಳೂರು: ‘ರಾಜ್ಯದಲ್ಲಿ ‘ಇ-ಸ್ವತ್ತು 2.0’ ತಂತ್ರಾಂಶದಡಿ ಇದುವರೆಗೆ 1,14,907 ಅರ್ಜಿಗಳನ್ನು ಅನುಮೋದಿಸಿ, ವಿಲೇವಾರಿ ಮಾಡಲಾಗಿದೆ’ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇಲಾಖೆಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಅವರು, ‘ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗೆ ಬಾಕಿ ಇವೆ’ ಎಂದು ಮಾಹಿತಿ ನೀಡಿದ್ದಾರೆ.

‘ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದಿಸುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಈ ಬಗ್ಗೆ ಕಳೆದ ಜನವರಿಯಲ್ಲಿ ಕೇಂದ್ರದ ಮಾಹಿತಿ ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಯ ಸಚಿವರಿಗೆ ಪತ್ರ ಬರೆಯಲಾಗಿತ್ತು. ಬಳಿಕ ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯಿತಿ ಹಂತದಲ್ಲಿ ಅವಕಾಶ ನೀಡಲಾಗಿದೆ. ಈವರೆಗೆ 478 ಹೊಸ ಬಡಾವಣೆಗಳಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 54 ಅರ್ಜಿಗಳಿಗೆ ಗ್ರಾಮ ಪಂಚಾಯಿತಿ ಹಂತದಲ್ಲಿ ಅನುಮೋದನೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿ ಸಲ್ಲಿಸುವಾಗ ತಮ್ಮ ಭಾಗದಲ್ಲಿ ಚಾಲ್ತಿಯಲ್ಲಿರುವ ಸೆಂಟ್ಸ್ ಪದ್ದತಿಯಂತೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಿಯೋಗ ಕೋರಿತ್ತು. ಅದರಂತೆ ಗುಂಟೆ ಮತ್ತು ಸೆಂಟ್ಸ್ ಅಳತೆಯಲ್ಲಿರುವ ಭೂಮಿಯ ವಿಸ್ತೀರ್ಣವನ್ನು ಚದರ ಮೀಟರ್ಗೆ ಪರಿವರ್ತಿಸಿ, ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ’ ಎಂದೂ ಹೇಳಿದ್ದಾರೆ.

‘ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ 10 ದಿನದೊಳಗೆ ಪೂರ್ಣಗೊಳಿಸಲಾಗುವುದು. ಇ-ಸ್ವತ್ತು ತಂತ್ರಾಂಶದ ಬಳಕೆದಾರರು ಲಾಗ್ ಇನ್ ವೇಳೆ ಎದುರಿಸುವ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು. ಹೆಚ್ಚಿನ ಮಾಹಿತಿಗೆ 9483476000 ಸಹಾಯವಾಣಿಯನ್ನು ಸಂಪರ್ಕಿಸಬಹುದು’ ಎಂದೂ ಪ್ರಿಯಾಂಕ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.